ಬಳ್ಳಾರಿ: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು ದಾಖಲಿಸಿದ್ದಾರೆ. ಆದರೆ, ಅಧಿಕೃತ ಘೋಷಣೆ ಬಾಕಿ ಇದೆ.
ಅನ್ನಪೂರ್ಣ ಅವರು 9 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅನ್ನಪೂರ್ಣ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ದಾಖಲಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.
ಸೋಲೊಪ್ಪಿಕೊಂಡಿರುವ ಬಂಗಾರು ಹನುಮಂತ, ಧರ್ಮದ ವಿರುದ್ಧ ಅಧರ್ಮ ಗೆದ್ದಿದೆ. ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇವೆ. ಕಾಂಗ್ರೆಸ್ ಹಣ ಬಲದಿಂದ ಗೆದ್ದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.








