ಬೆಂಗಳೂರು : ಕೊರೊನಾ ಸೋಂಕಿನಿಂದಾಗಿ ಕರ್ತವ್ಯ ನಿರತ ಪೌರಕಾರ್ಮಿಕರು ಮೃತರಾದರೆ ಅವರ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಿಸಬೇಕೆಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ತ್ಯಾಗ, ಸೇವೆ, ಸಮರ್ಪಣೆ, ಕಾರುಣ್ಯದಿಂದ ಸದಾ ಜೀವ ತೇಯುತ್ತಿರುವ ಪೌರಕಾರ್ಮಿಕರನ್ನು ಈ ಸಮಾಜ ಪ್ರತಿಕ್ಷಣವು ತಾಯ್ತನದಿಂದ ಕಾಣುವುದೇ ನಾವು ಅವರಿಗೆ ಸಲ್ಲಿಸಬಹುದಾದ ದೊಡ್ಡ ಕೃತಜ್ಞತೆ. ಪೌರಕಾರ್ಮಿಕ ದಿನಾಚರಣೆಯ ಶುಭಾಶಯಗಳು.
ಕೊರೋನಾ ಸಂಕಷ್ಟದ ಈ ದಿನಗಳಲ್ಲಿ ಜನರ ಆರೋಗ್ಯದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೂ ಪಣಕ್ಕಿಟ್ಟು ದುಡಿಯುತ್ತಿರುವ ಪೌರಕಾರ್ಮಿಕರು ವೈದ್ಯ ಸಮೂಹದಷ್ಟೆ ಪ್ರಧಾನ ಪಾತ್ರ ವಹಿಸಿದ್ದಾರೆ.
ಕರ್ತವ್ಯ ನಿರತ ಪೌರಕಾರ್ಮಿಕರು ಸೋಂಕಿನಿಂದ ಸಾವಿಗೆ ತುತ್ತಾದರೆ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರವನ್ನು ಸರ್ಕಾರ ನೀಡಬೇಕು.
ಹಣರೂಪದ ಪರಿಹಾರ ಸರ್ಕಾರದ ಆಡಳಿತಾತ್ಮಕ ಕರ್ತವ್ಯವಾಗುತ್ತದೆ. ಹೊಸ ಸುದ್ದಿಗಳನ್ನು ಇಲ್ಲಿ ಓದಿ
ಪೌರಕಾರ್ಮಿಕ ಸಮುದಾಯವನ್ನು ಸದಾ ಕೃತಜ್ಞತೆಯಿಂದ ಸ್ಮರಿಸುವುದು,ಅವರ ಬೇಡಿಕೆಗಳನ್ನು ಈಡೇರಿಸುವುದೇ ಅವರಿಗೆ ಸಲ್ಲಿಸಬಹುದಾದ ನಿಜ ಗೌರವವಾಗುತ್ತದೆ ಎಂದು ಬರೆದುಕೊಂಡಿದ್ದಾರೆ.








