ಬಂಜಾರ ಸಮುದಾಯದ ಶಾಸಕರು ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಈ ವೇಳೆ ಲಂಬಾಣಿ (ಬಂಜಾರ) ಸಮುದಾಯದ ವಲಸೆ ಕಾರ್ಮಿಕರಿಗೆ ಕೋವಿಡ್-19ರಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಸಮುದಾಯದ ಮುಖಂಡರು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಬಂಜಾರ ಸಮುದಾಯದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಬಂದು ಸೇರುತ್ತಿದ್ದಾರೆ. ಇನ್ನೂ ಕೆಲವರು ಸೇರುವರಿದ್ದಾರೆ. ಕಾರ್ಮಿಕರು ಒಂದು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಲಂಬಾಣಿ ಜನಾಂಗದ ವಲಸೆ ಕಾರ್ಮಿಕರಿಗೆ ಮಾಸಿಕ ವೇತನ ನೀಡುವಂತೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು…ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಬೇಕು ಎಂದು ಬಂಜಾರ ಸಮುದಾಯದ ಶಾಸಕರು ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಈ ವೇಳೆ ಶಾಸಕ ಪರಮೇಶ್ವರ ನಾಯಕ, ಪ್ರಕಾಶ್ ರಾಥೋಡ್, ಮಾಜಿ ಸಚಿವ ಶಿವಮೂರ್ತಿ, ಕಾಂತಾ ನಾಯಕ್ ಅವರು ಹಾಜರಿದ್ದರು.








