ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಮಾರ್ಚ್ 28 ರಿಂದ ವಾರ್ಷಿಕ ಪರೀಕ್ಷೆ Saaksha Tv
ಬೆಂಗಳೂರು : ಮಾರ್ಚ್ 28 ರಿಂದ ಏಪ್ರಿಲ್ 13 ರವರೆಗೆ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಹೇಳಿದ್ದಾರೆ.
ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಮಾರ್ಚ್ 28 ರಿಂದ ಏಪ್ರಿಲ್ 13 ರವರೆಗೆ ನಡೆಯಲಿದೆ. ಪರೀಕ್ಷೆಯು ಮಧ್ಯಾಹ್ನ 2.30 ರಿಂದ 5.45 ರ ಅವಧಿಯಲ್ಲಿ ವೇಳಾಪಟ್ಟಿಗೆ ಅನುಗುಣವಾಗಿ ನಡೆಸಲಾಗುತ್ತದೆ. ಏಪ್ರಿಲ್ 20ರೊಳಗೆ ಮೌಲ್ಯಮಾಪನ ಪೂರ್ಣಗೊಳಿಸಿ ಏಪ್ರಿಲ್ 30 ರಂದು ಆಯಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದರು.
ಇನ್ನೂ ಪ್ರಥಮ ಪಿಯುಸಿ ವಾರ್ಷಿಕ ಮತ್ತು ಪೂರಕ ಪರೀಕ್ಷೆಗಳನ್ನು ಜಿಲ್ಲಾಮಟ್ಟದಲ್ಲಿ ನಡೆಸುವಂತೆ ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರಿಗೆ ಶಿಕ್ಷಣ ಇಲಾಖೆ ನಿರ್ದೇಶಕರು ಸೂಚಿಸಿದ್ದಾರೆ. ಇನ್ನು ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ಶುಲ್ಕ ಪಾವತಿಸಲು ಮೇ. 16 ಕೊನೆಯ ದಿನವಾಗಿದೆ. ಮೇ. 25 ರಿಂದ ಜೂನ್ 6 ರವರೆಗೆ ಪೂರಕ ಪರೀಕ್ಷೆ ನಡೆಯಲಿದ್ದು, ಜೂನ್ 15 ರಂದು ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ.