ಬೆಂಗಳೂರು: ಸ್ವಾತಂತ್ರ‍್ಯ ಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿ ಅವರನ್ನು ಪಾಕ್ ಏಜೆಂಟ್ ಎಂದು ಕರೆದು ಭಾರಿ ಟೀಕೆಗೆ ಒಳಗಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಇದೀಗ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.
ಸದನದಲ್ಲಿ ಸಂವಿಧಾನದ ಕುರಿತು ಚರ್ಚೆಗಳು ನಡೆಯುತ್ತಿದ್ದ ಈ ವೇಳೆ ಮಾತನಾಡಿದ ಅವರು, ಮಹಾಭಾರತವನ್ನು ಬರೆದಿದ್ದು ಕೀಳುಜಾತಿಯ ವಾಲ್ಮೀಕಿ ಎಂದರು. ತಮ್ಮ ಭಾಷಣದಲ್ಲಿ ಅಂಬೇಡ್ಕರ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ ಯತ್ನಾಳ್, ಹಿಂದೂಗಳಿಗೆ ವೇದಗಳು ಬೇಕಾಗಿದ್ದವು. ಆಗ ಅವರು ವ್ಯಾಸನನ್ನು ಕರೆದರು. ಅವರಿಗೊಂದು ಮಹಾ ಕಾವ್ಯ ಮಹಾಭಾರತ ಬೇಕಾಗಿತ್ತು. ಆಗ ಅಸ್ಪೃಶ್ಯನಾದ ವಾಲ್ಮೀಕಿ ಬೇಕಾದ. ಇದೀಗ ಸಂವಿಧಾನದ ಅಗತ್ಯವಿದೆ ಅದಕ್ಕಾಗಿ ನನ್ನನ್ನು ಕರೆದರು ಎಂದು ಅಂಬೇಡ್ಕರ್ ಮಾತನ್ನು ಸದನದಲ್ಲಿ ತಪ್ಪಾಗಿ ಉಲ್ಲೇಖ ಮಾಡಿದರು.
ಯತ್ನಾಳ್ ಅವರ ತಪ್ಪನ್ನು ಗಮನಿಸಿದ ಇತರ ಸದಸ್ಯರು ಮಹಾಭಾರತವನ್ನು ಬರೆದಿದ್ದು ವ್ಯಾಸ ಮಹರ್ಷಿ ಹಾಗೂ ರಾಮಾಯಣ ಬರೆದಿದ್ದು ವಾಲ್ಮೀಕಿ ಎಂದು ತಪ್ಪನ್ನು ತಿದ್ದಿದ್ದರು.
‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ
ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...








