ಬೆಂಗಳೂರು: ಬಿಎಂಟಿಸಿ (BMTC) ಬಸ್ (Bus) ನಗರದಲ್ಲಿ ಮತ್ತೊಂದು ಬಲಿ ಪಡೆದಿದೆ.
ಬಿಎಂಟಿಸಿ ಬಸ್ ಹಾಗೂ ದ್ವಿಚಕ್ರ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಮೈಸೂರು ರಸ್ತೆ ಹಳೇ ಗುಡ್ಡದಹಳ್ಳಿ ಹತ್ತಿರ ಈ ಘಟನೆ ನಡೆದಿದೆ. ಬಿಎಂಟಿಸಿ ಬಸ್, ಬೈಕ್ ಗೆ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಸವಾರನ ತಲೆಗೆ ಪೆಟ್ಟಾಗಿ ತೀವ್ರ ರಕ್ತಸ್ರಾವವಾಗಿದೆ. ಹೀಗಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಕುರಿತು ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗಷ್ಟೇ ಬಿಎಂಟಿಸಿ ಬಸ್ ವಿಶೇಷ ಚೇತನರೊಬ್ಬರು ಸಾವನ್ನಪ್ಪಿರುವ ಘಟನೆ ಮೆಜೆಸ್ಟಿಕ್ ನಲ್ಲಿ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದ್ದು, ಸಾರ್ವಜನಿಕರು ಹಿಡಿ ಶಾಪ ಹಾಕುತ್ತಿದ್ದಾರೆ.