ರಾಜ್ಯದಲ್ಲಿ ಮತ್ತೊಂದು ಬಸ್ ಪಲ್ಟಿ ! | 6 ಜನರಿಗೆ ಗಾಯ
ಬೀದರ್: ಖಾಸಗಿ ಟ್ರಾವೇಲ್ಸ್ ಪಲ್ಟಿಯಾಗಿ 6 ಜನ ಗಾಯಗೊಂಡಿರುವ ಘಟನೆ ಗಡಿಜಿಲ್ಲೆ ಬೀದರ್ ತಾಲೂಕಿನ ಅಣದೂರು ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಮೂವರ
ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಬ್ರೀಮ್ಸ್ ಅಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಬೆಂಗಳೂರಿನಿಂದ ಬೀದರ್ಗೆ ಬರುತ್ತಿದ್ದ ಖಾಸಗಿ ಟ್ರಾವೇಲ್ಸ್ ಬಸ್ಗೆ ಬೈಕ್ ಸವಾರ ಅಡ್ಡ ಬಂದಿದ್ದಾನೆ. ಆಗ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಪಿಯಾಗಿ ಬಿದ್ದಿದೆ ಸದ್ಯ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ.
ಸುದ್ದಿ ತಿಳಿದ ಪ್ರಯಾಣಿಕರ ಸಂಬಂಧಿಗಳು ಬ್ರೀಮ್ಸ್ ಆಸ್ಪತ್ರೆಗೆ ದೌಡಾಯಿಸಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿದೆ. ಈ ಮಾಹಿತಿಯನ್ನು ಸ್ಥಳೀಯರು ಜನವಾಡ ಪೊಲೀಸರಿಗೆ ತಿಳಿಸಿದ್ದಾರೆ. ಪ್ರಸ್ತುತ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ಕೊಟ್ಟಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.








