murughashree | ಮುರುಘಾ ಶ್ರೀಗಳ ವಿರುದ್ಧ ಮತ್ತೊಂದು ಕೇಸ್
ಚಿತ್ರದುರ್ಗ : ಮಠದ ಆವರಣದ ಹಾಸ್ಟೆಲ್ ನಲ್ಲಿ ಇಬ್ಬರು ಬಾಲಕಿಯ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುರುಘಾಶ್ರೀ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.
ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಮುರುಘಾ ಶ್ರೀ ವಿರುದ್ಧ ಆಗಸ್ಟ್ 26 ರಂದು ಫೋಕ್ಸೋ ಪ್ರಕರಣ ಹಿನ್ನೆಲೆಯಲ್ಲಿ ಹಾಸ್ಟೆಲ್ ನಲ್ಲಿದ್ದ ಮಕ್ಕಳು ಬೇರೆಡೆ ಶಿಫ್ಟ್ ಮಾಡುವ ವೇಳೆ ಇಬ್ಬರು ಬಾಲಕಿಯರು ಪತ್ತೆಯಾಗಿದ್ದರು.

ಈ ಇಬ್ಬರು ಬಾಲಕಿಯರ ಬಗ್ಗೆ ಮಡಿಲು ಯೋಜನೆಗೆ ಮಾಹಿತಿ ದಾಖಲಿಸದೆ ಅಕ್ರಮವಾಗಿ ಸೇರಿಸಿಕೊಳ್ಳಲಾಗಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡದೆ ಅಕ್ರಮ ಹಾಗೂ ಬಾಲ ನ್ಯಾಯ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪ ಕೇಳಿಬಂದಿದೆ.