ಜೈಲಿನಿಂದ ಬರುತ್ತಿದ್ದಂತೆ ವಿನಯ್ ಕುಲಕರ್ಣಿ ವಿರುದ್ಧ ಮತ್ತೊಂದು ಕೇಸ್ Vinay Kulkarni
ಬೆಳಗಾವಿ : ಧಾರವಾಡ ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಇಂದು ಜಾಮೀನನ ಮೂಲಕ ಬಿಡುಗಡೆಗೊಂಡಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.
ಬರೋಬ್ಬರಿ 9 ತಿಂಗಳ ನಂತರ ವಿನಯ್ ಕುಲಕರ್ಣಿಗೆ ಜಾಮೀನು ಸಿಕ್ಕಿದ್ದು, ಹಿಂಡಲಗಾ ಜೈಲಿನಿಂದ ಇಂದು ಬಿಡುಗಡೆಯಾಗಿದ್ದಾರೆ.
ಇತ್ತ ವಿನಯ್ ಕುಲಕರ್ಣಿ ಬಿಡುಗಡೆ ಆಗುವುದು ಖಚಿತವಾಗುತ್ತಿದ್ದಂತೆ ಜೈಲಿನ ಮುಂಭಾಗದಲ್ಲಿ ಸಾಕಷ್ಟು ಮಂದಿ ಸೇರಿದ್ದರು. ವಿನಯ್ ಕುಲಕರ್ಣಿ ಹೊರ ಬರುತ್ತಿದ್ದಂತೆ ಅವರ ಅಭಿಮಾನಿಗಳು ಜೈಕಾರ ಹಾಕಿ ಬರ ಮಾಡಿಕೊಂಡರು.
ಈ ವೇಳೆ ನೂಕು ನುಗ್ಗಲು ಉಂಟಾಯಿತು. ಈ ಸಂದರ್ಭದಲ್ಲಿ ಕೊರೊನಾ ವೀಕೆಂಡ್ ಕಪ್ರ್ಯೂ ನಿಯಮ, ಕೊರೊನಾ ನಿಯಂತ್ರಣ ಕ್ರಮ ಗಾಳಿಗೆ ತೂರಲಾಗಿತ್ತು. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ 200 ಜನರ ವಿರುದ್ಧ ಬೆಳಗಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ವತಹ ಮಾಜಿ ಸಚಿವ ವಿನಯ್ ಕುಲಕರ್ಣಿಯವರೇ ಮಾಸ್ಕ್ ಧರಿಸದೇ ಮೆರವಣಿಗೆಯಲ್ಲಿ ಸಾಗಿದ್ದರು. ಇವರೊಂದಿಗೆ ನೆರೆದಿದ್ದಂತ ಅನೇಕ ಜನರು ಮಾಸ್ಕ್, ಸಾಮಾಜಿಕ ಅಂತರವನ್ನು ಮರೆತು, ಕೊರೊನಾ ರೂಲ್ಸ್ ಬ್ರೇಕ್ ಮಾಡಿದ್ದರು.
ಹೀಗಾಗಿ ವಿಜಯ್ ಕುಲಕರ್ಣಿ ಸೇರಿದಂತೆ 200ಕ್ಕೂ ಹೆಚ್ಚು ಮಂದಿ ವಿರುದ್ಧ ಬೆಳಗಾವಿ ಪೊಲೀಸ್ ಠಾಣಯಲ್ಲಿ ಪ್ರಕರಣ ದಾಖಲಾಗಿದೆ.