ಶುಕ್ರವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್ ರವರು ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕದಲ್ಲಿ ಹೊಸದಾಗಿ ಯಾವುದೇ ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ಹೇಳಿದ್ದರು. ಆದರೆ ಇಂದು ಮೆಕ್ಕಾದಿಂದ ವಾಪಸ್ಸಾಗಿದ್ದ ವ್ಯಕ್ತಿ ಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 16ಕ್ಕೇರಿದೆ. ಚಿಕ್ಕಬಳ್ಳಾಪುರದ ಗೌರಿಬಿದನೂರಿನ 32 ವರ್ಷದ ವ್ಯಕ್ತಿಯೊಬ್ಬರು ಮೆಕ್ಕಾ ಪ್ರವಾಸದಿಂದ ಹಿಂತಿರುಗಿದ್ದು, ಅವರಲ್ಲಿ #Covid19 ಸೋಂಕು ದೃಡಪಟ್ಟಿದೆ. ಅವರನ್ನು ಈಗಾಗಲೇ ಆಸ್ಪತ್ರೆಗೆ ದಾಖಲಿಸಿದ್ದು, ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. 
ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಅವರು ಟ್ವೀಟ್ ಮಾಡಿದ್ದು, ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ, ಮೆಕ್ಕಾ ಪ್ರವಾಸದಿಂದ ಹಿಂತಿರುಗಿದ್ದ 32 ವರ್ಷದ ವ್ಯಕ್ತಿಯೊಬ್ಬರಿಗೆ #Covid19 ಸೋಂಕು ದೃಡಪಟ್ಟಿದೆ. ಅವರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ನಾಗರಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ ಎಂದು ಸಚಿವರು ತಿಳಿಸಿದ್ದಾರೆ.









