ಮತ್ತೊಬ್ಬ ಭ್ರಷ್ಟ ಮುಖ್ಯಮಂತ್ರಿ ಬರಲಿದ್ದಾರೆ : ಸಿದ್ದರಾಮಯ್ಯ Siddaramaiah Saaksha_tv
ತುಮಕೂರು : ಒಬ್ಬ ಭ್ರಷ್ಟ ಮುಖ್ಯಮಂತ್ರಿ ಬದಲಾಗಿ ಮತ್ತೊಬ್ಬ ಭ್ರಷ್ಟ ಮುಖ್ಯಮಂತ್ರಿ ಬರಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ತುಮಕೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು,ಒಬ್ಬ ಭ್ರಷ್ಟ ಮುಖ್ಯಮಂತ್ರಿ ಬದಲಾಗಿ ಮತ್ತೊಬ್ಬ ಭ್ರಷ್ಟ ಮುಖ್ಯಮಂತ್ರಿ ಬರಲಿದ್ದಾರೆ.
ಉತ್ತರ ಕರ್ನಾಟಕದಲ್ಲಿ ನೆರೆ ನಡುವೆಯೂ ಅಧಿಕಾರಕ್ಕಾಗಿ ಬಿಜೆಪಿ ಮುಖಂಡರು ಕಿತ್ತಾಡುತ್ತಿದ್ದಾರೆ ಎಂದರು.
ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಬಿಜೆಪಿ ಅವರು ನೆರೆಯ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಅವರಿಗೆ ಅಧಿಕಾರ ಮುಖ್ಯ ಎಂದರು.
ತುಮಕೂರಿನಲ್ಲಿ ಕಾಂಗ್ರೆಸ್ ಪಕ್ಷದ ವಿಭಾಗೀಯ ಮಟ್ಟದ ಸಭೆ ನಡೆಯುತ್ತಿದ್ದು, ಸಿದ್ದರಾಮಯ್ಯ ಸಭೆಯಲ್ಲಿ ಭಾಗವಹಿಸಿದ್ದಾರೆ.









