ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಕ್ಕೆ ಮತ್ತೊಂದು ಬಲಿ. ವೆನ್ಲಾಕ್ ಅಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 75ರ ಕೊರೊನಾ ಸೋಂಕಿತ ವೃದ್ಧೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಸಂಜೆಯ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕೊರೋನಾ ಸೋಂಕಿನಿಂದ ಮೃತ ಪಟ್ಟ ಬಂಟ್ವಾಳ ಮಹಿಳೆಯ ಅತ್ತೆಯ ಗಂಟಲ ದ್ರವ ಪರೀಕ್ಷೆಯ ವರದಿ ಇಂದು ಬೆಳಿಗ್ಗೆ ಆರೋಗ್ಯ ಇಲಾಖೆ ಕೈ ಸೇರಿದ್ದು, ಕೊರೋನಾ ಸೋಂಕು ದೃಢಪಟ್ಟಿತ್ತು. ಅದರಂತೆ ವೆನ್ಲಾಕ್ ಅಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಂದು ಸಂಜೆ ಮೃತಪಟ್ಟಿದ್ದಾರೆ.
ಕಳೆದ ಒಂದು ತಿಂಗಳಿಂದ ಪಾರ್ಶ್ವವಾಯು ಪೀಡಿತರಾಗಿ ಪಡೀಲ್ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು, ಅವರ ಸೊಸೆ ಕೊರೊನಾದಿಂದ ಸಾವನ್ನಪ್ಪಿದ ಬಳಿಕ ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.