ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನಕ್ಕೆ ಕಾರ¨ನವಾಗಿತ್ತು. ಆದರೆ, ಸಿಐಡಿಯಲ್ಲಿ ಡಿವೈಎಸ್ಪಿ ಕೆಲಸ ಮಾಡುತ್ತಿದ್ದ ಮಹಿಳಾ ಪೊಲೀಸ್ ಅಧಿಕಾರಿ ಸ್ನೇಹಿತನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಸ್ನೇಹಿತ ಮನು ಎಂಬುವರ ಮನೆಯಲ್ಲಿ ಸಿಐಡಿ ಡಿವೈಎಸ್ಪಿ ಲಕ್ಷ್ಮಿ ಎಂಬುವರು ಆತ್ಮಹಂತ್ಯೆ ಮಾಡಿಕೊಂಡಿದ್ದಾರೆ.
33 ವರ್ಷದ ಲಕ್ಷ್ಮಿ, 2014ರ ಬ್ಯಾಚ್‍ನ ಕೆಎಸ್‍ಪಿಎಸ್ ಅಧಿಕಾರಿ. 2017ರಲ್ಲಿ ಸಿಐಡಿ ಡಿವೈಎಸ್ಪಿಯಾಗಿ ನೇಮಕೊಂಡಿದ್ದರು. 2017ರಿಂದಲೂ ಸಿಐಡಿಯಲ್ಲೇ ಕೆಲಸ ಮಾಡುತ್ತಿದ್ದ ಲಕ್ಷ್ಮಿ, ಕಳೆದ ರಾತ್ರಿ ಸ್ನೇಹಿತ ಮನು ಎಂಬುವರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೂ ಮುನ್ನ ಸ್ನೇಹಿತನ ಮನೆಯಲ್ಲಿ ಪಾರ್ಟಿ ಮಾಡಿದ್ದಾರೆ. ಪಾರ್ಟಿ ನಡೆಯುತ್ತಿರುವಾಗಲೇ ರಾತ್ರಿ 10.30ರ ವೇಳೆಗೆ ರೂಮ್‍ನ ಬಾಗಿಲು ಹಾಕಿಕೊಂಡಿದ್ದಾರೆ. ಸ್ವಲ್ಪ ಸಮಯವಾದರೂ ಲಕ್ಷ್ಮಿ ರೂಮಿನಿಂದ ಹೊರಗಡೆ ಬಾರದ ಹಿನ್ನೆಲೆಯಲ್ಲಿ ಬಾಗಿಲು ಒಡೆದು ನೋಡಿದಾಗ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ತಕ್ಷಣವೇ ಸ್ನೇಹಿತರು ಖಾಸಗಿ ಆಸ್ಪತ್ರೆಗೆ ಕರೆದೊಯ್ದರಾದರೂ ಆಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಡಿವೈಎಸ್ಪಿ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡ ಮನೆ ಮಾಲೀಕ ಹಾಗೂ ಸ್ನೇಹಿತ ಮನು ಸೇರಿದಂತೆ ಸ್ನೇಹಿತರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡ್ರಾ..!
ಸಿಐಡಿ ಡಿವೈಎಸ್ಪಿ ಲಕ್ಷ್ಮಿ ಹಲವು ತಿಂಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮಕ್ಕಳಾಗದ ಹಿನ್ನೆಲೆಯಲ್ಲಿ ಖಿನ್ನತೆಗೆ ಒಳಗಾಗಿದ್ದರು. ಪತಿ ಹೈದ್ರಾಬಾದ್‍ನಲ್ಲಿ ಕೆಲಸ ಮಾಡುತ್ತಿದ್ದು, ಲಕ್ಷ್ಮಿ ಒಬ್ಬರೇ ಕೋಣನಕುಂಟೆಯ ಮನೆಯಲ್ಲಿ ವಾಸವಾಗಿದ್ದರು.
ಈ ಹಿಂದೆ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೇ ಕಾರಣಕ್ಕೆ ಅವರನ್ನು ಕೌನ್ಸೆಲಿಂಗ್ ಮಾಡಿ, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಕೊಡಿಸಲಾಗಿತ್ತು. ವೈದ್ಯರು ಯಾವುದೇ ಕಾರಣಕ್ಕೂ ಮದ್ಯ ಸೇವಿಸಬಾರದು ಎಂದು ಕಟ್ಟುನಿಟ್ಟಿನ ಸಲಹೆ ನೀಡಿದ್ದರಂತೆ. ಆದರೂ, ಖಿನ್ನತೆಯಿಂದ ಹೊರಬರಲು ಮದ್ಯ ಸೇವನೆ ಮಾಡುತ್ತಿದ್ದರು. ಕಳೆದ ರಾತ್ರಿ ಮದ್ಯ ಸೇವನೆ ಮಾಡಿದ ನಂತರವೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.
ಮನೆಯಲ್ಲಿ ಒಬ್ಬರೇ ಇದ್ದ ಕಾರಣ ಅನ್ನಪೂರ್ಣೇಶ್ವರಿ ನಗರದ ಸ್ನೇಹಿತ ಮನು ಅಪಾರ್ಟ್‍ಮೆಂಟ್‍ಗೆ ಆಗಾಗ ತೆರಳುತ್ತಿದ್ದರಂತೆ. ಮನು ಗುತ್ತಿಗೆದಾರರಾಗಿದ್ದು, ಅವರ ಅಪಾರ್ಟ್‍ಮೆಂಟ್‍ನಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿತ್ತು. ಹಾಗಾಗಿ ಅಲ್ಲಿಗೆ ಆಗಾಗ ಹೋಗುತ್ತಿದ್ದರು ಎನ್ನಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel