ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ

1 min read
Bangalore saaksha tv

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ Bangalore saaksha tv

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ.

ನಗರದ ಎಲೆಕ್ಟ್ರಾನಿಕ್ಸ್ ಸಿಟಿಯ ಸಮೀಪದ ಸಂಪಿಗೆ ನಗರದ ವಸುಂದರ ಲೇಔಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಅಪಾರ್ಟ್ ಮೆಂಟ್ ನಲ್ಲಿ ಗ್ಯಾಸ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.

Bangalore saaksha tv

ಮೊದಲು ಎರಡು ಮನೆಗಳಿಗೆ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದ್ದು, ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.

ಸದ್ಯ ಅಗ್ನಿಶಾಮಕದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದು, ಈ ಕುರಿತಾಗಿ ಹೆಚ್ಚು ಮಾಹಿತಿ ತಿಳಿದು ಬರಬೇಕಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd