ತಿರುವನಂತಪುರಂ: ಭಾರೀ ಮಳೆಯಿಂದಾಗಿ ವಯನಾಡಿನಲ್ಲಿ ಭೂಕುಸಿತ ಉಂಟಾಗಿತ್ತು. ಈ ಅವಘಡದಲ್ಲಿ ಇಡೀ ಕುಟುಂಬವನ್ನು ಕಳೆದುಕೊಂಡ ನೋವಿನಲ್ಲಿದ್ದ ಸಂತ್ರಸ್ತೆಗೆ ಈಗ ಮತ್ತೊಂದು ಆಘಾತ ಎದುರಾಗಿದೆ.
ಸಂತ್ರಸ್ತೆ ಶೃತಿಗೆ ಈಗ ಆಘಾತ ಎದುರಾಗಿದ್ದು, ಭಾವಿ ಪತಿ ಜೆನ್ಸನ್ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕೋಝಿಕ್ಕೋಡ್-ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿಯ ವೆಲ್ಲರಂಕುನ್ನು ಬಳಿ ಬಸ್ ಗೆ ಓಮ್ನಿ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಅಂಬ್ಲವಾಯಲ್ ಮೂಲದ ಜೆನ್ಸನ್ ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ.
ವ್ಯಾನ್ ನಲ್ಲಿದ್ದವರಲ್ಲಿ ಶೃತಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿದ್ದವು. ಬಸ್ ಗೆ ಡಿಕ್ಕಿ ಹೊಡೆದಿದ್ದರಿಂದಾಗಿ ಈ ಅಪಘಾತ ಸಂಭವಿಸಿತ್ತು. ಭೂಕುಸಿತದಲ್ಲಿ ಲಾವಣ್ಯ ತನ್ನ ತಂದೆ-ತಾಯಿ ಮತ್ತು ಸಹೋದರನನ್ನು ಕಳೆದುಕೊಂಡಿದ್ದರು. ಒಬ್ಬಂಟಿಯಾಗಿದ್ದ ಶೃತಿಯ ಕೈ ಹಿಡಿಯಬೇಕಾಗಿದ್ದ ಯುವಕ ಕೂಡ ಸಾವನ್ನಪ್ಪಿದ್ದು, ಶೃತಿ ಏಕಾಂಗಿಯಾಗಿದ್ದಾರೆ. ವಿಧಿಯನ್ನು ಶಪಿಸುತ್ತಿದ್ದಾರೆ. ತನ್ನವರನ್ನೆಲ್ಲ ಕಳೆದುಕೊಂಡು ವಿಧಿಯನ್ನು ಶಪಿಸುತ್ತಿದ್ದಾರೆ.