ಚಿಕ್ಕಮಂಗಳೂರಿನ ಮತ್ತೊಂದು ಶಾಲೆಯಲ್ಲಿ ಕರೋನಾ ಸ್ಪೋಟ
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕ ಹೆಚ್ಚುತ್ತಿದ್ದು, ಶಿಕ್ಷಣ ಇಲಾಖೆಗೆ ತಲೆನೋವಾಗಲಿ ಪರಿಣಮಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮತ್ತೊಂದು ಖಾಸಗಿ ಶಾಲೆಯಲ್ಲಿ ಕೋವಿಡ್ ಸ್ಫೋಟಗೊಂಡಿದೆ.
ಎನ್.ಆರ್.ಪುರ ತಾಲೂಕಿನ ಜೀವನ್ ಜ್ಯೋತಿ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ 11 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಲಾಗಿದೆ.
ಕೆಲ ದಿನಗಳ ಹಿಂದೆಯಷ್ಟೆ ನವೋದಯ ಶಾಲೆಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿತ್ತು. ಕೊಪ್ಪ ತಾಲ್ಲೂಕಿನ ಸೀಗೋಡಿನ ವಸತಿ ಶಾಲೆಯಲ್ಲಿ ಕೊರೊನಾ ಪ್ರಕರಣಗಳು ಕಾಣಿಸಿಕೊಂಡಿದ್ದವು. ಇದರ ಬೆನ್ನಲ್ಲೇ ಇದೀಗ ಜೀವನ್ ಜ್ಯೋತಿ ಶಾಲೆಯಲ್ಲಿ ಕೊರೊನಾ ಸೋಂಕು ಹರಡಿದ್ದು, ಒಂದು ವಾರ ಕಾಲ ಶಾಲೆ ಸೀಲ್ ಡೌನ್ ಮಾಡಿ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದಾರೆ.








