ಬೆಂಗಳೂರು: ಈ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿಯಿಂದಾಗಿ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿಗೆ ಮತ್ತೊಂದು ಸಂಕಷ್ಟ ಶುರುವಾಗಿದೆ.
ಈಗ ಕಾಂಗ್ರೆಸ್ ಇದನ್ನೇ ಅಸ್ತ್ರವಾಗಿ ಪ್ರಯೋಗಿಸಲು ಮುಂದಾಗಿದೆ. ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ. ಅಲ್ಲದೇ, ರಾಜ್ಯ ಮಹಿಳಾ ಆಯೋಗ ಕುಮಾರಸ್ವಾಮಿ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಈ ಕುರಿತು ನೋಟಿಸ್ ಕೂಡ ಜಾರಿ ಮಾಡಿದೆ. ಅಲ್ಲದೇ, ಚುನಾವಣಾ ಆಯೋಗಕ್ಕೂ ದೂರು ನೀಡಲಾಗಿದೆ.
ಕುಮಾರಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮಾಜಿ ಸಂಸದ ಉಗ್ರಪ್ಪ, ಮಾಜಿ ಮೇಯರ್ ರಾಮಚಂದ್ರಪ್ಪ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.