ರಾಯಚೂರು: `ಪೊಲಿಟಿಕಲ್ ಜಡ್ಜ್‌ಮೆಂಟ್’ ಎಂದಿದ್ದ ಸಚಿವ ಜಮೀರ್ ಅಹ್ಮದ್ (Zameer Ahmed Khan) ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರು ಸೂಚನೆ ನೀಡಿದ್ದರು. ಈ ಬೆನ್ನಲ್ಲೇ ಜಮೀರ್‌ಗೆ ಮತ್ತೊಂದು ಸಂಕಷ್ಟ ಶುರುವಾಗಿದೆ.
ಚನ್ನಪಟ್ಟಣದ (Channapatna) ಯಾರಬ್‌ನಗರದಲ್ಲಿ ಮತಪ್ರಚಾರದ ವೇಳೆ ಮಹಿಳೆಯೊಬ್ಬರಿಗೆ 500 ರೂ. ನೋಟನ್ನು ಜಮೀರ್ ನೀಡಿದ್ದರು. ಹೀಗಾಗಿ ಮತ ಪ್ರಚಾರದ ವೇಳೆ ಹಣ ನೀಡಿರುವ ಕುರಿತು ದೂರು ದಾಖಲಾಗಿದೆ.
ಯಾರಬ್‌ನಗರದಲ್ಲಿ ಪ್ರಚಾರದ ವೇಳೆ ಮಹಿಳೆಗೆ 500 ರೂ. ಮುಖಬೆಲೆಯ ನೋಟನ್ನು ಜಮೀರ್ ನೀಡಿದ್ದರು. ಈ ದೃಶ್ಯದ ವೀಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಶನಿವಾರ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಪರ ಸಚಿವ ಜಮೀರ್, ರಹೀಂ ಖಾನ್, ಡಿ.ಕೆ.ಸುರೇಶ್ ಪ್ರಚಾರ ನಡೆಸಿದ್ದರು. ಈ ವೇಳೆ ಹಣ ನೀಡಿದ್ದರು. ಇದಕ್ಕೆ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಜೆಡಿಎಸ್ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.








