ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆರ್ ಸಿಬಿ ಸೋಲು ಕಂಡಿತು. ಆದರೆ, ಈ ಪಂದ್ಯದಲ್ಲಿ ವಿರಾಟ್ ಮತ್ತೊಂದು ದಾಖಲೆಗೆ ಸಾಕ್ಷಿಯಾದರು.
ಟಾಸ್ ಗೆದ್ದ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಆರ್ಸಿಬಿಗೆ 182 ರನ್ಗಳ ಗುರಿ ನೀಡಿತ್ತು. ಗುರಿ ಬೆನ್ನಟ್ಟಲು ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 16 ಎಸೆತಗಳಲ್ಲಿ 2 ಫೋರ್ ಹಾಗೂ 1 ಸಿಕ್ಸರ್ ನೊಂದಿಗೆ 22 ರನ್ ಗಳಿಸಿ, ಔಟ್ ಆದರು. ಈ ಸಿಡಿಸಿರುವ ಮೂರೇ ಬೌಂಡರಿಗಳೊಂದಿಗೆ ಅವರು ವಿಶೇಷ ದಾಖಲೆ ಬರೆದಿದ್ದಾರೆ.
ಈ ಪಂದ್ಯದಲ್ಲಿ ಬಾರಿಸಿದ 2 ಫೋರ್ ಹಾಗೂ 1 ಸಿಕ್ಸ್ನೊಂದಿಗೆ ವಿರಾಟ್ ಕೊಹ್ಲಿ ಐಪಿಎಲ್ನಲ್ಲಿ 900+ ಬೌಂಡರಿ ಬಾರಿಸಿದ 2ನೇ ಬ್ಯಾಟರ್ ಎಂಬ ದಾಖಲೆ ಬರೆದಿದ್ದಾರೆ. ಒಂದೇ ತಂಡದ ಪರ ಅತ್ಯಧಿಕ ಬೌಂಡರಿ ಬಾರಿಸಿದ ಬ್ಯಾಟ್ಸ್ಮನ್ ಎಂಬ ದಾಖಲೆ ಬರೆದಿದ್ದಾರೆ.
ಕೊಹ್ಲಿಗೂ ಮುನ್ನ ಶಿಖರ್ ಧವನ್ ಈ ಸಾಧನೆ ಮಾಡಿದ್ದಾರೆ. ಐಪಿಎಲ್ನಲ್ಲಿ 219 ಪಂದ್ಯಗಳನ್ನಾಡಿರುವ ಧವನ್ 766 ಫೋರ್ ಹಾಗೂ 152 ಸಿಕ್ಸರ್ ಸಿಡಿಸಿ 918 ಬೌಂಡರಿಗಳೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಬೌಂಡರಿ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಈ ಪಟ್ಟಿಯಲ್ಲಿ ವಿರಾಟ್ ಈಗ 2ನೇ ಸ್ಥಾನದಲ್ಲಿದ್ದಾರೆ. 233 ಇನಿಂಗ್ಸ್ ಗಳಲ್ಲಿ ಆಡಿರುವ ಕೊಹ್ಲಿ 660 ಫೋರ್ ಹಾಗೂ 242 ಸಿಕ್ಸರ್ ಸಿಡಿಸಿದ್ದಾರೆ. 902 ಬೌಂಡರಿ ಬಾರಿಸಿ ಈ ಸಾಧನೆ ಮಾಡಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 100 ಟಿ20 ಪಂದ್ಯಗಳನ್ನಾಡಿದ ವಿಶೇಷ ದಾಖಲೆಯನ್ನು ವಿರಾಟ್ ಕೊಹ್ಲಿ ಬರೆದಿದ್ದಾರೆ. ಒಂದೇ ಮೈದಾನದಲ್ಲಿ 100 ಟಿ20 ಪಂದ್ಯಗಳನ್ನಾಡಿದ ಮೊದಲ ಭಾರತೀಯ ಎಂಬ ದಾಖಲೆಯೂ ಕೊಹ್ಲಿ ಹೆಸರಿಗೆ ಬಂದಿದೆ.