ಬೆಂಗಳೂರಿನಲ್ಲಿ ಮತ್ತೋರ್ವ ಶಂಕಿತ ಉಗ್ರನ ಬಂಧನ – ಸಿಸಿಬಿ ಪೊಲೀಸರ ಕಾರ್ಯಾಚರಣೆ…
ಬೆಂಗಳೂರು ಉಗ್ರರ ಅಡಗುತಾಣವಾಗುತ್ತಿದೆಯಾ ಎಂಬ ಶಂಕೆ ವ್ಯಕ್ತವಾಗಿದೆ. ನಗರದಲ್ಲಿ ತಲೆಮರೆಸಿಕೊಂಡಿದ್ದ ಅಸ್ಸಾಂ ಮೂಲದ ಶಂಕಿತ ಉಗ್ರ ಅಖ್ತರ್ ಹುಸೇನ್ ಲಷ್ಕರ್ ಎಂಬಾತನನ್ನ City Crime Branch – CCB ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಜುಲೈ 24 ಅಂದರೆ ನಿನ್ನೆ ಭಾನುವಾರ ತಡರಾತ್ರಿ 7 ಗಂಟೆ ಸುಮಾರಿಗೆ ಶಂಕಿತ ಉಗ್ರ ವಾಸವಿದ್ದ ಮನೆಯ ಮೇಲೆ 30ಕ್ಕೂ ಹೆಚ್ಚು ಸಿಬ್ಬಂದಿಯಿದ್ದ ಸಿಸಿಬಿ ಪೊಲೀಸರ ತಂಡ ದಾಳಿ ನಡೆಸಿದೆ. ತಿಲಕ್ ನಗರದ ಬಿಟಿಪಿ ಪ್ರದೇಶದಲ್ಲಿ ಕಟ್ಟಡವೊಂದರ ಮೂರನೇ ಮಹಡಿಯಲ್ಲಿದ್ದ ರೂಮ್ ನಲ್ಲಿ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ ಕೆಲ ಯುವಕರೊಂದಿಗೆ ಶಂಕಿತ ಉಗ್ರನೂ ವಾಸ್ತವ್ಯ ಹೂಡಿದ್ದ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಪ್ರಕರಣ ಸಂಬಂಧ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಳೆದ ತಿಂಗಳಷ್ಟೇ ಬೆಂಗಳೂರಿನಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಈತ ಶ್ರೀರಾಂಪುರದಲ್ಲಿ ತಲೆಮರೆಸಿಕೊಂಡು ಓಡಾಡುತ್ತಿದ್ದ. ತನ್ನ ಹೆಸರನ್ನೂ ತಾಲಿಕ್ ಎಂದು ಬದಲಿಸಿಕೊಂಡಿದ್ದ.
suspected terrorist arrested in Bangalore – CCB police operation








