ಅಮರಾವತಿ: ನಿಂತಿದ್ದ ಪ್ಯಾಸೆಂಜರ್ ರೈಲಿಗೆ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, 6 ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಅಲ್ಲದೇ, ಘಟನೆಯಲ್ಲಿ 280ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆಂಧ್ರದಲ್ಲಿ ಈ ಘಟನೆ ನಡೆದಿದೆ. ಪ್ಯಾಸೆಂಜರ್ ರೈಲು ವಿಶಾಖಪಟ್ಟಣಂನಿಂದ ರಾಯಗಡಕ್ಕೆ ತೆರಳುತ್ತಿತ್ತು. ಆದರೆ, ಓವರ್ ಹೆಡ್ ಕೇಬಲ್ ಸಮಸ್ಯೆಯಿಂದಾಗಿ ಅದು ನಿಂತಿತ್ತು ಎನ್ನಲಾಗಿದೆ. ಈ ಸಂದರ್ಭದಲ್ಲಿ ಪಲಾಸ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿ ನಿಂತಿದ್ದ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಸಂತಾಪ ಸೂಚಿಸಿ, ಘಟನೆಗೆ ವಿಷಾಧಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.