ಮತ್ತೊಂದು ರೈಲು ದುರಂತ ಸಂಭವಿಸಿದ್ದು, ಎರಡು ಗೂಡ್ಸ್ ರೈಲುಗಳು ಮುಖಾಮುಖಿ ಡಿಕ್ಕಯಾಗಿವೆ.
ಪಶ್ಚಿಮ ಬಂಗಾಳ(West Bengal)ದ ಓಂಡಾ ರೈಲು ನಿಲ್ದಾಣದ ಹತ್ತಿರ ಈ ಡಿಕ್ಕಿ ಸಂಭವಿಸಿದೆ. ಗೂಡ್ಸ್ ರೈಲು ಮುಖ್ಯ ಮಾರ್ಗದ ಬದಲಿಗೆ ಲೂಪ್ ಲೈನ್ಗೆ ಪ್ರವೇಶಿಸಿ ಮತ್ತೊಂದು ಸರಕು ರೈಲಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮವಾಗಿ 12 ಬೋಗಿಗಳು ಹಳಿ ತಪ್ಪಿವೆ. ಜೂನ್ 2 ರಂದು ಬಾಲಸೋರ್ನಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಆ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದ್ದು, ಆತಂಕ ವ್ಯಕ್ತವಾಗುತ್ತಿದೆ.
ಈ ಘಟನೆಯಲ್ಲಿ ರೈಲಿನ ಪೈಲಟ್ ಗಾಯಗೊಂಡಿದ್ದಾರೆ. ಸದ್ಯ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.








