ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case)ಲ್ಲಿ ಜೈಲುಪಾಲಾಗಿರುವ ದರ್ಶನ್ ಗೆ ಐಟಿ ಸಂಕಷ್ಟ ಶುರುವಾಗಿದೆ.
ಜಾಮೀನಿಗೆ ಯತ್ನಿಸುತ್ತಿರುವ ದರ್ಶನ್ ರನ್ನು ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಲಿದ್ದಾರೆ. ಕೊಲೆ ಪ್ರಕರಣದಲ್ಲಿನ ಹಣದ ವಹಿವಾಟಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಗುರುವಾರ ಅಥವಾ ಶುಕ್ರವಾರ ಬಳ್ಳಾರಿ ಜೈಲಿಗೆ ತೆರಳಲಿದ್ದಾರೆ ಎನ್ನಲಾಗುತ್ತಿದೆ.
ಈಗಾಗಲೇ ಆರೋಪಿ ದರ್ಶನ್ ವಿಚಾರಣೆಗೆ ಕೋರ್ಟ್ ಅದೇಶ ನೀಡಿದೆ. ಐಟಿ ಅಧಿಕಾರಿಗಳಿಗೆ ಸಹಕಾರ ನೀಡುವಂತೆ ಕೋರ್ಟ್ನಿಂದ ಜೈಲಿಗೆ ಇ-ಮೇಲ್ ಕಳುಹಿಸಲಾಗಿದೆ. ಹಣ ಕೊಟ್ಟು ಕೊಲೆ ಆರೋಪವನ್ನು ಮತ್ತೊಬ್ಬರ ಮೇಲೆ ಹೊರಿಸಲು ಪ್ಲಾನ್ ಮಾಡಲಾಗಿತ್ತು ಎಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಹಣದ ಮೂಲ ತಿಳಿಯಲು ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ.