ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ ಬೇರೆ ಬೇರೆ ಮಾರ್ಗದೊಂದಿಗೆ ಭಟ್ಕಳಕ್ಕೆ ತೆರಳಿರುವ ಶಂಕೆ ವ್ಯಕ್ತವಾಗುತ್ತಿದೆ.
ಈ ವ್ಯಕ್ತಿ ಬಾಂಬ್ ಬ್ಲಾಸ್ಟ್ ಆಗುತ್ತಿದ್ದಂತೆ ಬಸ್ ಹತ್ತಿ ತುಮಕೂರಿನಲ್ಲಿ ಇಳಿದು ಅಲ್ಲಿಂದ ಬಳ್ಳಾರಿಗೆ ತೆರಳಿ, ಗೋಕರ್ಣ ಬಸ್ ಹತ್ತಿ ಭಟ್ಕಳಕ್ಕೆ ತೆರಳಿರುವ ಶಂಕೆ ವ್ಯಕ್ತವಾಗುತ್ತಿದೆ. ಸದ್ಯ ಎನ್ ಐಎ ಅಧಿಕಾರಿಗಳು ಬಳ್ಳಾರು ಹಾಗೂ ತುಮಕೂರು ಬಸ್ ನಿಲ್ದಾಣಕ್ಕೆ ತೆರಳಿ ಮಾಹಿತಿ ಕಲೆ ಹಾಕುತ್ತಿವೆ.
ಸದ್ಯ ಈಗಾಗಲೇ ಶಂಕಿತ ಉಗ್ರನ ಕುರಿತು ಸುಳಿವು ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ. ಶಂಕಿತನ ಸುಳಿವು ನೀಡಿದವರ ಹೆಸರು ಗೌಪ್ಯವಾಗಿ ಇಡುವುದಾಗಿ ಎನ್ ಐಎ ತಿಳಿಸಿದೆ. ಇಲ್ಲಿಯವರೆಗೆ ಆರೋಪಿ ಚಹರೆ ಕಾಣುವ ಫೋಟೋ ಇರಲಿಲ್ಲ. ಎನ್ಐಎ ಬಿಡುಗಡೆ ಮಾಡಿರುವ ಫೋಟೋದಲ್ಲಿ ಅಲ್ಪ ಸ್ವಲ್ಪ ಮುಖ ಕಾಣಿಸುತ್ತಿದೆ.