Santosh Patil: ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಿಕ್ತು ಮತ್ತೊಂದು ಟ್ವಿಸ್ಟ್

1 min read
Asha Aihole Letter Saaksha Tv

ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಿಕ್ತು ಮತ್ತೊಂದು ಟ್ವಿಸ್ಟ್

ಬೆಳಗಾವಿ: ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿಗೆ, ಅಂದಿನ ಜಿ.ಪಂ. ಅಧ್ಯಕ್ಷೆ ಪತ್ರ ಪೊಲೀಸರಿಗೆ ಲಭ್ಯವಾಗಿದೆ.

ಈ ಮೂಲಕ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು. ಇನ್ನೂ ಪತ್ರವನ್ನು 2021ರ ಫೆಬ್ರವರಿ 15ರಂದು ಆಗಿನ ಬೆಳಗಾವಿ ಜಿ.ಪಂ.ಅಧ್ಯಕ್ಷೆ ಆಶಾ ಐಹೊಳೆ ಅವರು ಹಿಂಡಲಗಾ ಗ್ರಾಮದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿಗೆ ವಿಶೇಷ ಅನುದಾನ ಮಂಜೂರು ಮಾಡುವಂತೆ 108 ಕಾಮಾಗಾರಿಗಳ ಪಟ್ಟಿ ಸಮೇತವಾಗಿ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.

ಈ ಕಾಮಗಾರಿ ಅನುಮೋದನೆಗಾಗಿ ಆದೇಶಿಸಲಾಗಿದೆ ಎಂದು 2022ರ ಫೆಬ್ರವರಿ 26ರಂದು ಸಹಿ ಮಢಿರುವ ಲೆಟರ್ ಲಭ್ಯವಾಗಿದೆ. ಮಾರ್ಚ 5 ರಂದು ಆದೇಶದ ಪ್ರತಿ ನೀಡಲಾಗುವುದು ಎಂದು ಕೈಬರಹದಲ್ಲಿ ಬರೆದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸೀಲ್ ಹಾಕಲಾಗಿದೆ.

ಇನ್ನೂ ಏಪ್ರಿಲ್ 20ರಂದು ಹಿಂಡಲಗಾ ಗ್ರಾಮ ಪಂಚಾಯತಿ ಅಧ್ಯಕ್ಷ ನಾಗೇಶ್ ನನ್ನು ಉಡುಪಿ ಪೊಲೀಸರು ವಿಚಾರಣೆ ನಡೆಸಿದಾಗ, ಕೆಲ ದಾಖಲೆ ವಶಪಡಿಸಿಕೊಳ್ಳಲಾಗಿದೆ. ಮುಂದುವರೆದು ಸಂತೋಷ ಪಾಟೀಲ್ ಗೆ ಹಣ ನೀಡಿರೋ ನಾಗೇಶ್ ಅದಕ್ಕೆ ಪ್ರತಿಯಾಗಿ ಸಂತೋಷ ಪಾಟೀಲ್ ನ ಮನೆಯನ್ನು 32 ಲಕ್ಷ ರೂಪಾಯಿಗೆ ಜಿಪಿಎ ಮಾಡಿಕೊಂಡಿದ್ದಾರೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd