ಬೆಂಗಳೂರು: ನಗರದಲ್ಲಿ ಕಿಲ್ಲರ್ ಬಿಎಂಟಿಸಿ (BMTC Accident) ಬಸ್ಗೆ ಮತ್ತೊಂದು ಬಲಿಯಾಗಿರುವ ಪ್ರಕರಣ ಶನಿವಾರ ನಡೆದಿದೆ.
ನಗರದಲ್ಲಿನ ಮಾರತ್ತಹಳ್ಳಿಯ ವರ್ತೂರು ಮುಖ್ಯ ರಸ್ತೆಯಲ್ಲಿ ಬಿಎಂಟಿಸಿ ವೋಲ್ವೋ ಬಸ್ ಹರಿದು ಬೈಕ್ ಸವಾರ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಬೈಕ್ ಸವಾರ ಎಳಂಗೋವನ್ ಸೆಂಕತ್ತವಲ್(43) ಸಾವನ್ನಪ್ಪಿದ ದುರ್ದೈವಿ ಎನ್ನಲಾಗಿದೆ. ಅಪಘಾತದಲ್ಲಿ ಸವಾರ ತಲೆ ಹಾಗೂ ಮುಖದ ಭಾಗಕ್ಕೆ ಬಲವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲು ಯತ್ನಿಸುತ್ತಿದ್ದ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರಿಗೆ ಮೃತ ಬೈಕ್ ಸವಾರ ಎಳಂಗೋವನ್ ಸೆಂಕತ್ತವಲ್ ತೆರಳುತ್ತಿದ್ದರು. ಇದೇ ಮಾರ್ಗದಲ್ಲಿ ಬರುತ್ತಿದ್ದ ವೇಳೆ ಬೈಕ್ ಗೆ ಬಿಎಂಟಿಸಿ ವೊಲ್ವೋ ಬಸ್ ಡಿಕ್ಕಿ ಹೊಡೆದಿದೆ. ರಭಸಕ್ಕೆ ಸವಾರ ಕೆಳಗೆ ಬಿದ್ದು ಗಾಯಗೊಂಡಿದ್ದಾನೆ. ಹೆಚ್ಎಎಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








