ನೆಲಮಂಗಲ: ಕಿಲ್ಲರ್ ಬಿಎಂಟಿಸಿ ಮತ್ತೊಂದು ಬಲಿ ಪಡೆದಿದೆ.
ಬಿಎಂಟಿಸಿ ಬಸ್ ವೊಂದು ಬೈಕ್ಗೆ (Bike) ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ಘಟನೆ ನೆಲಮಂಗಲದ ಹತ್ತಿರದ ಬಿನ್ನಮಂಗಲ ಬಳಿ ಘಟನೆ ನಡೆದಿದೆ. ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಗುದ್ದಿದ್ದು, ಗುದ್ದಿದ ರಭಸಕ್ಕೆ ಬೈಕ್ ಸವಾರ ನೆಲಕ್ಕೆ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.