ರಾಜ್ಯದಲ್ಲಿ ಮತ್ತೊಂದು ವಾರ ಲಾಕ್ ಡೌನ್ ಘೋಷಣೆ : ಸಿಎಂ ಘೋಷಣೆ Lockdown
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಕಂಟ್ರೋಲ್ ಗೆ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಜೂನ್ 14ರ ವರೆಗೆ ವಿಸ್ತರಣೆ ಮಾಡಿ ಸಿಎಂ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಈ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
ಸದ್ಯ ರಾಜ್ಯದಲ್ಲಿ ಜೂನ್ 7 ರವರೆಗೆ ಲಾಕ್ ಡೌನ್ ಜಾರಿಯಲ್ಲಿತ್ತು.
ಇದೀಗ ಇದನ್ನು ಜೂನ್ 14ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಜೊತೆಗೆ 500 ಕೋಟಿ ರೂಪಾಯಿಯ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
ಸದ್ಯ ರಾಜ್ಯದಲ್ಲಿರುವ ನಿಯಮಗಳೇ ಈ ಲಾಕ್ ಡೌನ್ ನಲ್ಲಿ ಇರಲಿವೆ.