ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್‍ಡೌನ್ ಸೂಕ್ತ : ಎಸ್.ಟಿ.ಸೋಮಶೇಖರ್

1 min read
S T Somashekhar

ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್‍ಡೌನ್ ಸೂಕ್ತ : ಎಸ್.ಟಿ.ಸೋಮಶೇಖರ್ lockdown

ಮೈಸೂರು : ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್‍ಡೌನ್ ಮುಂದುವರಿಸುವ ಬಗ್ಗೆ ಚಿಂತನೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಸಿಎಂ ಜೊತೆಗಿನ ವಿಡಿಯೋ ಸಂವಾದದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್ ಡೌನ್ ಮುಂದುವರೆಸುವ ಬಗ್ಗೆ ಚಿಂತನೆ ಇದೆ. ಜನಪ್ರತಿನಿಧಿಗಳ ಸಭೆ ಕರೆದು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು.

lockdown

‘ಶಾಸಕರು, ಸಂಸದರ ಜೊತೆ ಚರ್ಚಿಸಿ, ಲಾಕ್‍ಡೌನ್ ವಿಸ್ತರಣೆ ಮಾಡಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು’ ಎಂದರು.

ಇನ್ನು ಮೈಸೂರು ಜಿಲ್ಲೆಯಲ್ಲಿ ವೈದ್ಯರ ನಡೆ ಹಳ್ಳಿ ಕಡೆ ಪರಿಕಲ್ಪನೆ ಯಶಸ್ವಿಯಾಗುತ್ತಿದೆ. ಈ ಯೋಜನೆಯನ್ನು ಮತ್ತೊಂದು ವಾರ ವಿಸ್ತರಣೆ ಮಾಡಲಾಗುವುದು. ಈ ವಿಚಾರವನ್ನು ಮುಖ್ಯಮಂತ್ರಿ ಗಮನಕ್ಕೂ ತಂದಿದ್ದು, ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd