ತುಮಕೂರು: ಇತ್ತೀಯಚೆಗೆ ಯುವ ಪೀಳಿಗೆ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಹೆಚ್ಚಿನ ಘಟನೆಗಳು ವರದಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗುತ್ತಿದೆ.
ಇತ್ತೀಚೆಗಷ್ಟೇ ಬಾಲಕಿಯೋರ್ವಳು ಹೃದಯಾಘಾತಕ್ಕೆ ಬಲಿಯಾಗಿದ್ದ ಘಟನೆ ನಡೆದಿತ್ತು. ಅದು ಮಾಸುವ ಮುನ್ನವೇ ಪ್ರಥಮ ಪಿಯುಸಿ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಈ ಘಟನೆ ಜಿಲ್ಲೆಯ ಗುಬ್ಬಿ (Gubbi) ತಾಲೂಕಿನ ನಿಟ್ಟೂರಿನ ವಿನಾಯಕ ಕಾಲೇಜಿನಲ್ಲಿ ನಡೆದಿದೆ.
ಶಮಂತ್ (17) ಹೃದಯಾಘಾತಕ್ಕೆ ಬಲಿಯಾಗಿರುವ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಕಾಲೇಜಿನ ಮುಂದೆ ಸ್ನೇಹಿತರೊಂದಿಗೆ ಮಾತನಾಡುತ್ತಾ ಶಮಂತ್ ನಿಂತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಗಿದೆ. ಆದರೆ, ಮಾರ್ಗ ಮಧ್ಯೆ ಆತ ಸಾವನ್ನಪ್ಪಿದ್ದಾನೆ. ಕುಟುಂಬಸ್ಥರ, ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟಿದೆ.