ದೇಶಾದ್ಯಂತ ಸಿಎಎ ಪರ ಮತ್ತು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳು ಕೊನೆಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ . ಈಗಾಗಲೇ ಕೇಂದ್ರ ಸರಕಾರ ಯಾವುದೇ ಕಾರಣಕ್ಕೂ ಮಸೂದೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದೆ. ಇದರ ಬೆನ್ನಲ್ಲೇ ಸ್ವಲ್ಪ ದಿನಕ್ಕೆ ತಣ್ಣಗಾದ ಹಿಂಸಾಚಾರ ಉತ್ತರ ಪ್ರದೇಶದಲ್ಲಿ ಮತ್ತೆ ಪುನರಾವರ್ತನೆ ಆಗುವ ಲಕ್ಷಣಗಳು ಕಾಣುತ್ತಿದೆ. ಇದೀಗ ಉತ್ತರ ಪ್ರದೇಶದ ಅಲಿಘರ್ನಲ್ಲಿ ಪೊಲೀಸರು ಪ್ರತಿಭಟನಾಕಾರರಿಗೆ ಪ್ರತಿಭಟನಾ ಸ್ಥಳದಲ್ಲಿ ಪೆಂಡಾಲ್ ಹಾಕಲು ಅನುಮತಿ ನೀಡದನ್ನು ಪ್ರಶ್ನಿಸಿ ಏಕಾಏಕಿ ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪನ್ನು ಚದುರಿಸಿದ್ದು, ಸ್ಥಳಕ್ಕೆ ಆಗಮಿಸಿದ ರಾಪಿಡ್ ಆಕ್ಷನ್ ಫೋರ್ಸ್ ಪರಿಸ್ಥಿತಿಯನ್ನು ಹತೊಟ್ಟಿಗೆ ತಂದಿದೆ. ಘಟನೆಯಲ್ಲಿ ಕೆಲ ಪೊಲೀಸರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪೊಲೀಸ್ ವಾಹನಗಳು ಜಖಂ ಗೊಂಡಿವೆಯೆಂದು ವರದಿಯಾಗಿದೆ .
ನನ್ನ ಇಲಾಖೆಯಲ್ಲಿ ಯಾರೂ ಹಸ್ತಕ್ಷೇಪ ಮಾಡುತ್ತಿಲ್ಲ; ಪರಮೇಶ್ವರ್
ಬೆಂಗಳೂರು: ಗೃಹ ಇಲಾಖೆಯಲ್ಲಿ ನನ್ನ ಬಿಟ್ಟು ಯಾರ ಹಸ್ತಕ್ಷೇಪವೂ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ (G. Parameshwara) ಹೇಳಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ....