ಕಾರವಾರ: ಅರಣ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ಜಿಂಕೆಯ ಕೊಂಬುಗಳನ್ನು ವಶಕ್ಕೆ ಪಡೆದು, ಓರ್ವ ವ್ಯಕ್ತಿಯನ್ನು ಬಂಧಿಸಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆ ಜೋಯಿಡಾದ ಶಿವಾಜಿ ವೃತ್ತದ ಮನೆಯಲ್ಲಿ ಈ ಘಟನೆ ನಡೆದಿದೆ. ಪ್ರಕಾಶ್ ನಾಯ್ಕ್ ಬಂಧಿತ ವ್ಯಕ್ತಿ ಎನ್ನಲಾಗಿದೆ. ಆರೋಪಿ ಹತ್ತಿರ ಹುಲಿ ಉಗುರು ಕೂಡ ಇರುವುದರ ಕುರಿತು ಮಾಹಿತಿ ತಿಳಿದು ಬಂದಿದೆ.
ದಾಂಡೇಲಿಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ಕೆ.ಶೇಟ್ ನೇತೃತ್ವದಲ್ಲಿ ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.