ಕೊಲಂಬೊ: ಶ್ರೀಲಂಕಾದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾರ್ಕ್ಸ್ವಾದಿ ಶಾಸಕ ಅನುರಾ ಕುಮಾರ ದಿಸ್ಸಾನಾಯಕೆ (Anura Kumara Dissanayake) ಭರ್ಜರಿ ಗೆಲುವು ಸಾಧಿಸಿದ್ದಾರೆ.
ಈ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷರಾಗಿದ್ದ ರನಿಲಾ ವಿಕ್ಸಮಸಿಂಘೆ (Ranil Wickremesinghe) ಸೋಲು ಕಂಡಿದ್ದಾರೆ. ದಿಸ್ಸಾನಾಯಕೆ ಅವರು ಶೇ. 42.31 ಮತ ಗಳಿಸುವ ಮೂಲಕ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಕೊಲಂಬೊದ ವಸಾಹತುಶಾಹಿ ಯುಗದ ಅಧ್ಯಕ್ಷೀಯ ಕಾರ್ಯದರ್ಶಿ ಕಚೇರಿಯಲ್ಲಿ ಸೋಮವಾರ ದಿಸ್ಸಾನಾಯಕೆ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ. 2019 ರ ಅಧ್ಯಕ್ಷೀಯ ಚುನಾವಣೆಯಲ್ಲಿ ದಿಸ್ಸಾನಾಯಕೆ ಕೇವಲ ಶೇ. 3ರಷ್ಟು ಮತಗಳನ್ನು ಪಡೆದಿದ್ದರು. ಈಗ ಅಲ್ಲಿ ರಾಜಕೀಯ ಬದಲಾವಣೆಯಾಗಿದ್ದು, ದಿಸ್ಸಾನಾಯಕೆ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಆರ್ಥಿಕ ಬಿಕ್ಕಟ್ಟಿನಿಂದಾಗಿ ಕಂಗೆಟ್ಟಿದ್ದ ಶ್ರೀಲಂಕಾದ ಜನರು ಹಾಲಿ ಅಧ್ಯಕ್ಷರಿಗೆ ಸೋಲಿನ ರುಚಿ ತೋರಿಸಿದ್ದಾರೆ. ಈ ಬಾರಿ ಶೇ.76 ರಷ್ಟು ಮತದಾರರು ಹಕ್ಕು ಚಲಾಯಿಸಿದ್ದರು.








