ಮಗುವಿನ ನಿರೀಕ್ಷೆಯಲ್ಲಿರುವ ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟಿಗ ವಿರಾಟ್ ಕೊಹ್ಲಿ
ಮುಂಬೈ, ಅಗಸ್ಟ್ 27: ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟಿಗ ವಿರಾಟ್ ಕೊಹ್ಲಿ ಸೋಷಿಯಲ್ ಮೀಡಿಯಾದಲ್ಲಿ ನಮ್ಮ ಬಾಳಲ್ಲಿ ಹೊಸ ಜೀವವೊಂದರ ಆಗಮನದ ಶುಭ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಗುರುವಾರ ತಮ್ಮ ಅಭಿಮಾನಿಗಳಿಗೆ ಸಂತೋಷದ ಸುದ್ದಿಯನ್ನು ನೀಡಿರುವ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟ್ವಿಟರ್‌ನಲ್ಲಿ ಜನವರಿ 2021 ರಲ್ಲಿ ಮಗುವಿನ ಆಗಮನವಾಗಲಿದೆ ಎಂದು ಅವರು ತಮ್ಮ ಟ್ವಿಟರ್ ಖಾತೆಗಳಲ್ಲಿ ಬರೆದಿದ್ದಾರೆ.

ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ತಮ್ಮಿಬ್ಬರ ಸಂತೋಷದ ಕ್ಷಣದ ಫೋಟೋವೊಂದನ್ನು ಹಂಚಿಕೊಂಡಿರುವ ಅನುಷ್ಕಾ
ತದನಂತರ, ನಾವು ಮೂವರು! ಜನವರಿ 2021 ಕ್ಕೆ ಮಗುವಿನ ಆಗಮನವಾಗಲಿದೆ ಎಂದು ಟ್ವೀಟ್ ಮಾಡಿದ್ದರೆ, ಕೊಹ್ಲಿ ಕೂಡ ಅದೇ ಪದಗಳನ್ನು ಬರೆದಿದ್ದಾರೆ.

ಮೂರು ವರ್ಷಗಳ ಹಿಂದೆ ವಿರಾಟ್ ಮತ್ತು ಅನುಷ್ಕಾ ಇಟಲಿಯಲ್ಲಿ ವಿವಾಹವಾಗಿದ್ದರು.








