ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಈ ಸಿಹಿ ಸುದ್ದಿಯನ್ನು ಅನುಷ್ಕಾ ಶರ್ಮಾ ಅವರು ಇನ್ ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಫೆ.15 ರಂದು ವಿರುಷ್ಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುದ್ದಿಯನ್ನು ಮಂಗಳವಾರ (ಫೆ.20) ಹಂಚಿಕೊಂಡಿದ್ದಾರೆ. ವಮಿಕಾಳ ತಮ್ಮನನ್ನು ಈ ಜಗತ್ತಿಗೆ ಸ್ವಾಗತಿಸಿದ್ದೇವೆ ಬರೆದುಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.
ಸಂತಸದ ಸಮಯದಲ್ಲಿ ನಿಮ್ಮ ಆಶೀರ್ವಾದ ಮತ್ತು ಶುಭಹಾರೈಕೆಗಳನ್ನು ಬಯಸುತ್ತೇವೆ. ಈ ಸಮಯದಲ್ಲಿ ನಮ್ಮ ಗೌಪತ್ಯೆಯನ್ನು ಗೌರವಿಸಲು ವಿನಂತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಮಗುವಿಗೆ ಈಗಾಗಲೇ ‘ಅಕಾಯ್’ ಎಂದು ಹೆಸರಿಟ್ಟಿದ್ದಾರೆ. ಕೊಹ್ಲಿ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.
ಇಂಗ್ಲೆಂಡ್ ವಿರುದ್ಧ ನಡೆಯುತ್ತಿದ್ದ ಟೆಸ್ಟ್ ಸರಣಿಯಿಂದ ವೈಯಕ್ತಿಕ ಕಾರಣ ನೀಡಿ ಕೊಹ್ಲಿ ಹೊರಗುಳಿದಿದ್ದರು. ಈ ಮಧ್ಯೆ ಅವಪ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಅಭಿಮಾನಿಗಳು ಹಾರೈಸುತ್ತಿದ್ದಾರೆ.