ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ (Anushka Sharma) ದಂಪತಿ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.
ಹೀಗಾಗಿಯೇ ಅವರು ಕೆಲವು ದಿನಗಳಿಂದ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ. ವಿರಾಟ್ ಕೊಹ್ಲಿ ಅವರೊಂದಿಗೆ ಎಲ್ಲಿಗೂ ಪ್ರಯಾಣಿಸುತ್ತಿಲ್ಲ ಹಾಗೂ ಪಂದ್ಯಗಳನ್ನು ವೀಕ್ಷಿಸಲು ಕ್ರೀಡಾಂಗಣಕ್ಕೆ ಬರುತ್ತಿಲ್ಲ ಎನ್ನಲಾಗುತ್ತಿದೆ. ಅನುಷ್ಕಾ ತನ್ನ ಎರಡನೇ ಮಗುವನ್ನು ನಿರೀಕ್ಷಿಯಲ್ಲಿದ್ದಾರೆ. ಕಳೆದ ಬಾರಿಯಂತೆ, ಅವರು ಮುಂದಿನ ದಿನಗಳಲ್ಲಿ ಈ ಸಿಹಿ ವಿಚಾರವನ್ನು ಸಾರ್ವಜನಿಕವಾಗಿ ಹಂಚಿಕೊಳಲ್ಲಿದ್ದಾರೆ ಎನ್ನಲಾಗಿದೆ.