ಸತ್ತವರಂತೆ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಗರ್ಭಕಂಠ ಕ್ಯಾನ್ಸರ್ ಕುರಿತಂತೆ ಜಾಗೃತಿಗಾಗಿ ನಟಿ ಸತ್ತವರಂತೆ ನಾಟಕವಾಗಿದ್ದರು. ಹೀಗಾಗಿ ಕಾಶಿಪ್ ಎಂಬ ವಕೀಲರು ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ನಟಿ ಪೂನಂ ಹಾಗೂ ಅವರ ಮ್ಯಾನೇಜರ್ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯ ವಿರುದ್ಧ ಸಾಕಷ್ಟು ವಿರೋಧಗಳು ವ್ಯಕ್ತವಾಗಿವೆ. ಔಷಧಿ ಕಂಪನಿಗಳು ಹಣ ನೀಡಿ, ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪವಿತ್ತು. ಆದರೆ, ಈ ಕುರಿತು ಸ್ವತಃ ನಟಿ ಸ್ಪಷ್ಟನೆ ನೀಡಿದ್ದಾರೆ. ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ ಕಂಪನಿಗಳು ತಮಗೆ ಹಣ ನೀಡಿಲ್ಲ ಎಂದು ಬರೆದುಕೊಂಡಿದ್ದಾರೆ.
ಗರ್ಭಕಂಠ ಕ್ಯಾನ್ಸರ್ (Cervical cancer) ಕುರಿತಂತೆ ಜಾಗೃತಿ ಮೂಡಿಸುವುದಕ್ಕಾಗಿ ಈ ರೀತಿ ಮಾಡಿರುವ ನಟಿಯನ್ನು ಅರೆಸ್ಟ್ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಅಲ್ಲದೇ, ಸಾಮಾಜಿಕ ಜಾಲತಾಣದಲ್ಲಿ ‘ಬಾಯ್ಕಾಟ್ ಪೂನಂ ಪಾಂಡೆ’ (Boycott) ಟ್ರೆಂಡ್ ಆರಂಭವಾಗಿದೆ. ಇದರ ಬೆನ್ನಲ್ಲಿಯೇ ಪೂನಂ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಶಾಸಕ ಸತ್ಯಜೀತ್ ತಾಂಬೆ ಮುಂಬೈ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಪ್ರಚಾರಕ್ಕಾಗಿ ಇಂತಹ ಸ್ಟಂಟ್ಗಳನ್ನ ಮಾಡುವಂತವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಪೊಲೀಸರಿಗೆ ತಿಳಿಸಿದ್ದಾರೆ.