ಕಾಬೂಲ್ : ಅಫ್ಘಾನಿಸ್ತಾನದಲ್ಲಿ ಭಾರೀ ಮಳೆ ಅವಾಂತರ ಸೃಷ್ಟಿಸಿದೆ. ಉತ್ತರ ಹಾಗೂ ಪೂರ್ವ ಭಾಗದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿದ್ದು, ಈಗಾಗಲೇ ನೆರೆಯಿಂದಾಗಿ 190ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ ಹಲವೆಡೆ ಗುಡ್ಡ ಗಾಡು ಪ್ರದೇಶಗಳಲ್ಲಿ ಗ್ರಾಮಗಳೆಲ್ಲಾ ಜಲಾವೃತಗೊಂಡು ಮನೆಗಳೆಲ್ಲಾ ನೀರಿನಲ್ಲಿ ಮುಳುಗಿಹೋಗಿದ್ರೆ ರಸ್ತೆಗಳೆಲ್ಲಾ ನಡುಗಡ್ಡೆಯಾಗಿ ಮಾರ್ಪಾಡಾಗಿವೆ.
ಹಲವೆಡೆ ರಸ್ತೆಗಳು ಕೊಚ್ಚಿ ಹೋಗಿದ್ರೆ, ಇನ್ನೂ ಕೆಲವು ಕಡೆ ಭೂ ಕುಸಿತವಾಗಿದೆ. ಇನ್ನೂ ಈ ಭೀಕರ ಪ್ರವಾಹದಲ್ಲಿ ನೂರಾರು ಮಂದಿ ಮೃತಪಟ್ಟಿದ್ದರೆ ಇನ್ನೂ ಹಲವರು ನಾಪತ್ತೆಯಾಗಿದ್ದಾರೆ. ಸದ್ಯ ಪ್ರವಾಹದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಭದ್ರತಾ ಪಡೆ ಸಿಬ್ಬಂದಿಗಳು ಕಾರ್ಯಪ್ರೌರುತ್ತರಾಗಿದ್ದಾರೆ.








