ಬಕೆಟ್ ಹಿಡಿದವರಿಗೆ ಸಚಿವ ಸ್ಥಾನ, ಪ್ರಾಮಾಣಿಕರಿಗೆ ಬೆಲೆಯಿಲ್ಲ : ಅಪ್ಪಚ್ಚು ರಂಜನ್
ಕೊಡಗು : ಸಂಪುಟ ವಿಸ್ತರಣೆ ಬೆನ್ನಲ್ಲೆ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಇದೀಗ ಕೊಡಗಿನ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ” ಇಲ್ಲಿ ಬಕೆಟ್ ಹಿಡಿದವರಿಗೆ ಸಚಿವ ಸ್ಥಾನ ಕೊಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡುತ್ತ ಸಚಿವ ಸ್ಥಾನ ಬಗ್ಗೆ ಪ್ರತಿಕ್ರಿಯೆ ನೀಡಿ, ಸದ್ಯ ಬಿಜೆಪಿಯಲ್ಲಿ ಬಕೆಟ್ ಹಿಡಿದವರಿಗೆ ಸಚಿವ ಸ್ಥಾನ ನೀಡಲಾಗುತ್ತಿದೆ.
ನಾವು ಪ್ರಾಮಾಣಿಕವಾಗಿ ಇದ್ದುದಕ್ಕೆ ಏನೂ ಸಿಗುತ್ತಿಲ್ಲ. ಸಂಘ ಪರಿವಾರದವರು ಹೇಳಿದಾಗ ಸುಮ್ಮನೆ ಪಕ್ಷದ ವಿಚಾರ ಬೀದಿಗೆ ಬರಬಾರದು ಎಂದು ಸುಮ್ಮನೆ ಇದ್ದೆವು.
ಆದರೆ ಈಗ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎಂದು ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದರು.
ಇನ್ನು ನಾನು ಹುಣಸೂರು ಉಪ ಚುನಾವಣೆಯಲ್ಲಿ ಚುನಾವಣಾ ಉಸ್ತುವಾರಿ ವಹಿಸಿದ್ದೆ. ಆದರೆ, ಉಪ ಚುನಾವಣೆಯಲ್ಲಿ ವಿಶ್ವನಾಥ್ ಸೋಲಲು ಸಿ.ಪಿ.ಯೋಗೇಶ್ವರ್ ಅವರೇ ಕಾರಣ ಎಂದು ಆರೋಪಿಸಿದ ಅಪ್ಪಚ್ಚು ರಂಜನ್, ಅಂಥವರಿಗೆ ಸಚಿವ ಸ್ಥಾನ ಕೊಟ್ಟಿರುವುದು ದುರಂತ ಸ್ವಪಕ್ಷದ ವಿರುದ್ಧವೇ ವಾಗ್ದಾಳಿ ನಡೆಸಿದರು.
ಇದೇ ವೇಳೆ ಕಾಂಗ್ರೆಸ್ ಶಾಸಕ ಜಮೀರ್ ಕ್ಷೇತ್ರಕ್ಕೆ ವಿಶೇಷ ಅನುದಾನ ನೀಡಿದ ಬಗ್ಗೆ ಮಾತನಾಡಿ, ಜಮೀರ್ ಅಹ್ಮದ್ ಕ್ಷೇತ್ರಕ್ಕೆ ವಿಶೇಷ ಅನುದಾನ ನೀಡಿರುವುದು ಸರಿಯಲ್ಲ.
ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿದೆ. ಪ್ರಕೃತಿ ವಿಕೋಪಕ್ಕೆ ಒಳಗಾದ ಜಿಲ್ಲೆಗಳಿಗೆ ಮೊದಲ ಆದ್ಯತೆ ನೀಡಬೇಕಿತ್ತು ಎಂದು ಸಿಎಂ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









