ಶಿವಮೊಗ್ಗ : ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಜಿ ಅಪ್ಪಾಜಿ ಗೌಡ ನಿನ್ನೆ ರಾತ್ರಿ ಮೃತಪಟ್ಟಿದ್ದು, ಅವರ ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದೆ.
ತೀವ್ರ ಜ್ವರ ಹಾಗೂ ಉಸಿರಾಟದ ತೊಂದತೆ ಕಾಣಿಸಿಕೊಂಡ ಹಿನ್ನೆಲೆ ಅಪ್ಪಾಜಿಗೌಡ ಅವರು ಮೂರು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೋವಿಡ್ -19 ಸೋಂಕಿರುವುದು ದೃಢಪಟ್ಟಿತ್ತು. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ.
ನೆಚ್ಚಿನ ನಾಯಕನ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಕೊರೊನಾವನ್ನು ಲೆಕ್ಕಿಸದೇ ಆಸ್ಪತ್ರೆ ಮುಂದೆ ಸಾವಿರಾರು ಸಂಖ್ಯೆಯಲ್ಲಿ ಅವರ ಅನುಯಾಯಿಗಳು ಜಮಾಯಿಸಿದ್ದರು. ನಂತರ ಮಧ್ಯರಾತ್ರಿ 2 ಗಂಟೆಗೆ ಪಾರ್ಥಿವ ಶರೀರವನ್ನು ಭದ್ರಾವತಿಯ ಅವರ ನಿವಾಸಕ್ಕೆ ಕೊಂಡೊಯ್ಯಲಾಯಿತು. ಮಾಜಿ ಶಾಸಕರ ಪಾರ್ಥಿವ ಶರೀರ ತಮ್ಮ ನಿವಾಸಕ್ಕೆ ತೆರಳುತ್ತಿದ್ದಂತೆ ನಿವಾಸದ ಬಳಿಯಲ್ಲಿಯೂ ಅಂತಿಮ ದರ್ಶನ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದೆ. ಅಂತಿಮ ದರ್ಶನಕ್ಕೆ ಮನೆಯ ಮುಂದೆ ಶಾಮಿಯಾನ ಹಾಕಿ ವ್ಯವಸ್ಥೆ ಮಾಡಲಾಗಿದೆ. ಭದ್ರಾವತಿ ಪಟ್ಟಣದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಪೊಲೀಸರು ಬ್ಯಾರಿಕೇಡ್ ಹಾಕಿ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದಾರೆ. ಗೋಣಿಬಿಡಿನ ಅವರ ತೋಟದಲ್ಲಿ ಶವ ಸಂಸ್ಕಾರ ಮಾಡಲಾಗುತ್ತದೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.








