ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಮೂಲಕ ಮನವಿ
ನವದೆಹಲಿ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ 12ನೇ ತರಗತಿಯ ಪರೀಕ್ಷೆ ರದ್ದು ಮಾಡುವಂತೆ ಕೋರಿ ಸುಪ್ರೀಂಕೋರ್ಟ್ಗೆ ಶುಕ್ರವಾರ ಅರ್ಜಿ ಸಲ್ಲಿಕೆಯಾಗಿದೆ. ವಕೀಲೆ ಮಮತಾ ಶರ್ಮಾ ಎಂಬುವವರು ಅರ್ಜಿ ಸಲ್ಲಿಸಿದ್ದು, ಕೊರೊನಾ ಸಂಕಷ್ಟ ಕಾಲದಲ್ಲಿ 12ನೇ ತರಗತಿ ಕೆಲ ವಿದ್ಯಾರ್ಥಿಗಳು ನನ್ನನ್ನು ಸಂಪರ್ಕಿಸಿ ಪರೀಕ್ಷೆ ಕುರಿತು ಹಲವು ಸಮಸ್ಯೆಗೆ ಬಗ್ಗೆ ಚರ್ಚಿಸಿದ್ದಾರೆ. ಹೀಗಾಗಿ ಅವರ ಪರವಾಗಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದೇನೆ ಎಂದಿದ್ದಾರೆ.
ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾಲದಲ್ಲಿ 12ನೇ ತರಗತಿಯ ಪರೀಕ್ಷೆ ನಡೆಸಲು ಸಾಧ್ಯವಿಲ್ಲ. ಅಲ್ಲದೇ ಈ ವೇಳೆ ಆನ್ಲೈನ್ನಲ್ಲಿಯೇ ಪರೀಕ್ಷೆ ನಡೆಸುವುದು ಸಹ ಕಷ್ಟಸಾಧ್ಯ. ಅಷ್ಟೇ ಅಲ್ಲ 12ನೇ ತರಗತಿ ಫಲಿತಾಂಶ ಘೋಷಣೆಯಲ್ಲಿ ವಿಳಂಬವಾದರೆ ವಿದೇಶಿ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಲಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಇನ್ನು ಸಿಬಿಎಸ್ಇ ಮತ್ತು ಸಿಐಎಸ್ಸಿಇ ಬೋರ್ಡ್ಗಳು ನಿರ್ದಿಷ್ಟ ಸಮಯದೊಳಗೆ ಫಲಿತಾಂಶ ಘೋಷಿಸಲು ಮುಂದಾಗಬೇಕು. ಇಲ್ಲದಿದ್ದರೆ ಇದು ಸುಮಾರು 12 ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಲಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








