ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಖಾಲಿ ಇರುವ ಗ್ರೂಪ್ ಸಿ ವೃಂದದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ – ಪಿಡಿಒ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಹೊರಡಿಸಲಾಗಿದೆ.
ಉಳಿಕೆ ಮೂಲ ವೃಂದ ಹಾಗೂ ಹೈದ್ರಾಬಾದ್ ಕರ್ನಾಟಕ ವೃಂದಕ್ಕೆ ಪ್ರತ್ಯೇಕ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಏಪ್ರಿಲ್ 15 ರಿಂದ ಸಲ್ಲಿಸಬಹುದಾಗಿದೆ.
ಕರ್ನಾಟಕ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ವೇತನ ಶ್ರೇಣಿ ರೂ.37,900-70,850 ನಿಗದಿಪಡಿಸಲಾಗಿದೆ. ಭಾರತದ ಕಾನೂನಿನ್ವಯ ಸ್ಥಾಪಿತವಾದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕ ಪದವಿ ವಿದ್ಯಾರ್ಹತೆ ಪಡೆದಿರಬೇಕು. ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
ಎಸ್ಸಿ, ಎಸ್ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 15-04-2024. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-05-2024. ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು.