SBI Junior Associate Recruitment 2025 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ :
ಜೂನಿಯರ್ ಅಸೋಸಿಯೇಟ್ಸ್ (ಕಸ್ಟಮರ್ ಸಪೋರ್ಟ್ & ಸೇಲ್ಸ್)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 5180 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಒಟ್ಟು 270 ಹುದ್ದೆಗಳು ಖಾಲಿ ಇದೆ.
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. (ಪದವಿಯ ಅಂತಿಮ ವರ್ಷ/ಸೆಮಿಸ್ಟರ್‌ನಲ್ಲಿರುವ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. ಆದರೆ ಆಯ್ಕೆ ಸಂದರ್ಭದಲ್ಲಿ ಅವರು 31-12-2025 ರಂದು ಅಥವಾ ಅದಕ್ಕೂ ಮೊದಲು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುರಾವೆಯನ್ನು ಒದಗಿಸಬೇಕು)
ವಯೋಮಾನ :
ದಿನಾಂಕ 01/04/2025ಕ್ಕೆ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 28 ವರ್ಷ ವಯೋಮಾನ ಮೀರಿರಬಾರದು.
ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 24,050 ರಿಂದ ರೂ. 64,480 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸ್ಥಳೀಯ ಭಾಷಾ ಪ್ರಾವೀಣ್ಯತೆ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಕನ್ನಡದಲ್ಲೂ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಕೇಂದ್ರಗಳು :
ಬೆಂಗಳೂರು, ಬೆಳಗಾವಿ, ದಾವಣಗೆರೆ, ಕಲಬುರಗಿ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಉಡುಪಿ.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ :
• ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳು – ರೂ. 750
• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಬಿಡಿ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ :
ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 06, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 26, 2025








