ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭ
ಬೆಂಗಳೂರು : 2021ನೇ ಸಾಲಿನ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ.
ಕೊರೊನಾ ಎರಡನೇ ಅಲೆ ಮಧ್ಯೆ ಶಿಕ್ಷಣ ಇಲಾಖೆ ಈ ಸಾಲಿನ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಾರಂಭ ಮಾಡಿದೆ.
ಜೂನ್ 15 ರಿಂದ ಜುಲೈ 10ರ ವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಆಗಸ್ಟ್ 28 ಮತ್ತು 29ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಹೀಗಾಗಿ ಇಂದಿನಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸಲಾಗಿದೆ.
ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೇಳಾಪಟ್ಟಿ ಹೀಗಿದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ- ಜೂನ್ 15 ರಿಂದ ಜುಲೈ 10ವರೆಗೆ
ಆನ್ ಲೈನ್ ಮೂಲಕ ಶುಲ್ಕ ಪಾವತಿಗೆ ಕೊನೆ ದಿನ- ಜುಲೈ 13
ವಿಶೇಷ ಪ್ರವರ್ಗಗಳ ದಾಖಲಾತಿ ಸಲ್ಲಿಕೆ- ಜುಲೈ 14 ರಿಂದ ಜುಲೈ 20
ಆನ್ ಲೈನ್ ಅರ್ಜಿ ಮಾಹಿತಿ ತಿದ್ದುಪಡಿ- ಜುಲೈ 19 ರಿಂದ ಜುಲೈ 22
ಆಗಸ್ಟ್ 13ರಿಂದ ಸಿಇಟಿ ಪರೀಕ್ಷೆಗೆ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳುವುದು









