ಬೆಂಗಳೂರು : ರಾಜ್ಯದಲ್ಲಿ ಕೊರೊನಾಸುರನ ಅಟ್ಟಹಾಸ ಮುಂದುವರಿಯುತ್ತಲೇ ಇದೆ. ಸೋಂಕು ಹರಡುವುದನ್ನು ತಡೆಯಲು ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಂಡಿದ್ದರೂ ವಿವಿಧ ಜಿಲ್ಲೆಗಳಿಗೆ ಇನ್ನು ಉಸ್ತುವಾರಿ ಸಚಿವರ ನೇಮಕವಾಗಿಲ್ಲ. ಇದರಿಂದ ಕೊರೊನಾ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರಕ್ಕೆ ತುಸು ಕಷ್ಟವಾಗುತ್ತಿದೆ. ಹೀಗಾಗಿ ಇಂದು ಸಂಜೆಯೊಳಗೆ ಎಲ್ಲ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಇನ್ನು ಮೂಲಗಳು ಪ್ರಕಾರ ಹಾಲಿ ಜಿಲ್ಲಾ ಉಸ್ತುವಾರಿಗಳ ಹೊಣೆಯನ್ನು ಮರು ಹಂಚಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಮನಗರಕ್ಕೆ ಸದ್ಯ ಡಿಸಿಎಂ ಅಶ್ವತ್ಥ್ ನಾರಾಯಣ್ ಉಸ್ತುವಾರಿವಾಗಿದ್ದು, ಈ ಹೊಣೆಯನ್ನು ಎಸ್.ಟಿ.ಸೋಮಶೇಖರ್ ಅವರಿಗೆ ವಹಿಸುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ ಉಸ್ತುವಾರಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ, ಹಾವೇರಿ ಜಿಲ್ಲೆಯ ಉಸ್ತುವಾರಿಯನ್ನು ಬಿ.ಸಿ.ಪಾಟೀಲ್ ಅವರಿಗೆ ನೀಡುವ ಸಾಧ್ಯತೆ ಇದೆ. ಇದೇ ವೇಳೆ, ಬೆಳಗಾವಿ ಉಸ್ತುವಾರಿಯನ್ನು ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ನೀಡುವ ಸಾಧ್ಯತೆ ಇದ್ದು, ಸಚಿವ ಆಂದ್ ಸಿಂಗ್ ಅವರಿಗೆ ಬಳ್ಳಾರಿ ಉಸ್ತುವಾರಿ ವಹಿಸುವ ನಿರೀಕ್ಷೆ ಇದೆ.








