ಬೆಂಗಳೂರು : ಕೊರೊನಾ ಬಿಕ್ಕಟ್ಟಿನ ನಡುವೆ ರಾಜ್ಯ ಬಿಜೆಪಿ ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ 27 ಮಂದಿ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಕ್ಷೇತ್ರದ ಬಿಜೆಪಿ ಅಧ್ಯಕ್ಷ ಶಿವಣ್ಣಗೌಡ ಅವರು, ಪದಾಧಿಕಾರಿಗಳನ್ನ ನೇಮಕ ಮಾಡಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ಮುಂದಾಗುವಂತೆ ಸೂಚಿಸಿದ್ದಾರೆ.
ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಎದುರಾಗುವ ನಿರೀಕ್ಷೆಯಿರೋದ್ರಿಂದ ಪಕ್ಷ ಸಂಘಟನೆಗೆ ಬಿಜೆಪಿ ಮುಂದಾಗಿದ್ದು, ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಕಳೆದ ಬಾರಿ ಕಾಂಗ್ರೆಸ್ ವರ್ಸಸ್ ಬಿಜೆಪಿ ಎಂಬ ನೇರ ಹಣಾಹಣಿ ಕ್ಷೇತ್ರದಲ್ಲಿತ್ತು. ಆದ್ರೆ ಈಗ ಪರಿಸ್ಥಿತಿ ಬದಲಾಗಿದೆ.
ಕಳೆದ ಚುನಾವಣೆಯಲ್ಲಿ ಇಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿತ್ತು. ಆದ್ರೆ ಈಗ ಮುನಿರತ್ನ ಅವರು ಕಮಲ ಹಿಡಿದಿದ್ದು, ಎರಡು ಪಕ್ಷದಲ್ಲಿ ಅಭ್ಯರ್ಥಿ ಯಾರೇ ಆದ್ರೂ ಸರಿ, ಮೊದಲು ಪಕ್ಷ ಸಂಘಟನೆಯಾಗಬೇಕು. ಈ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ವಿವಿಧ ಸಂಘಟನೆಗಳಿಗೆ ಪದಾಧಿಕಾರಿಗಳ ನೇಮಕ ಮಾಡಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಲು ಶಿವಣ್ಣಗೌಡ ಸೂಚನೆ ನೀಡಿದ್ದಾರೆ. ಇನ್ನು ಕ್ಷೇತ್ರದ ಅಧ್ಯಕ್ಷರ ಸೂಚನೆಯಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಇಂದಿನಿಂದ ಕಾರ್ಯಾರಂಭ ಮಾಡಲಿದ್ದಾರೆ.








