ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಅಪ್ಪು ನೆನಪಲ್ಲಿ ಅನಾವರಣವಾಯಿತು “ಜೈಹೋ ಕನ್ನಡಿಗ” ಹಾಡು 

Namratha Rao by Namratha Rao
December 28, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಅಪ್ಪು ನೆನಪಲ್ಲಿ ಅನಾವರಣವಾಯಿತು “ಜೈಹೋ ಕನ್ನಡಿಗ” ಹಾಡು

ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ ಮೂಡಿಬಂದಿದೆ ಜೆ.ಆರ್.ಶಿವ ರಚಿಸಿ, ಸಂಗೀತ ನೀಡಿರುವ ಈ ಗೀತೆ. ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ “ಒರಟ ಐ ಲವ್ ಯು” ಚಿತ್ರಕ್ಕೆ ಜಿ.ಆರ್.ಶಂಕರ್ ಅವರೊಡನೆ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದ, ಶಿವ ನಂತರ “ಈ ಸಂಜೆ” ಚಿತ್ರದಲ್ಲೂ ಕಾರ್ಯ ನಿರ್ವಹಿಸಿದ್ದರು.‌

Related posts

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

April 2, 2026
ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

April 2, 2026

ಕೆಲವು ವರ್ಷಗಳ ನಂತರ ಮತ್ತೆ ಮರಳಿ ಬಂದಿರುವ ಶಿವ, “ಜೈಹೋ ಕನ್ನಡಿಗ” ಎಂಬ ಹಾಡನ್ನು ಬರೆದು ಸಂಗೀತ ನೀಡಿದ್ದಾರೆ. ಈ ಹಾಡನ್ನು ಪುನೀತ್ ರಾಜ್‍ಕುಮಾರ್ ಅವರಿಗೆ ಅರ್ಪಣೆ ಮಾಡಿದ್ದಾರೆ. ಈ ಹಾಡಿನಲ್ಲಿ ಜೆ.ಆರ್. ಶಿವ, ಹಂಸಲೇಖ, ವಿ.ಮನೋಹರ್, ಸಿ.ಆರ್.ಮನೋಹರ್, ವಿ.ನಾಗೇಂದ್ರ ಪ್ರಸಾದ್, ದೊಡ್ಡರಂಗೇಗೌಡ, ಸಾಲುಮರದ ತಿಮ್ಮಕ್ಕ, ಕೆ.ಮಂಜು, ಅನಿರುದ್ಧ್, ಶ್ರೀಧರ್ ವಿ ಸಂಭ್ರಮ್, ಮಾಸ್ಟರ್ ಆನಂದ್, ಧರ್ಮ ಕೀರ್ತಿರಾಜ್, ಧರ್ಮ, ಪೊಲೀಸ್ ಅಧಿಕಾರಿಗಳು, ಸಾಕಷ್ಟು ಸಂಖ್ಯೆಯಲ್ಲಿ ಕಲಾವಿದರು, ಮಕ್ಕಳು ಅಭಿನಯಿಸಿದ್ದಾರೆ.

ಅದ್ದೂರಿಯಾಗಿ ಮೂಡಿಬಂದಿರುವ ಈ ಗೀತೆಯನ್ನು ಪದ್ಮಶ್ರೀ ದೊಡ್ಡರಂಗೇಗೌಡ, ಸಿ.ಆರ್.ಮನೋಹರ್, ಗಂಡಸಿ ಸದಾನಂದ ಸ್ವಾಮಿ, ಪಿ.ಆರ್.ಓ ಸುಧೀಂದ್ರ ವೆಂಕಟೇಶ್, ನಟಿ ಲಲಿತಮ್ಮ,  ಮಹಾಲಕ್ಷ್ಮಿ ಸ್ವೀಟ್ಸ್ ನ ಹರಣ್ ರಾಜ್ , ಅರುಣ್ ಸೇರಿದಂತೆ ಮುಂತಾದ ಗಣ್ಯರು ಬಿಡುಗಡೆ ಮಾಡಿದರು. ರಂಗಭೂಮಿ ಹಿನ್ನೆಲೆಯಿಂದ ಬಂದಿರುವ ಶಿವ,  ಈ ಹಾಡಿನ ಮೂಲಕ ಏಳುಕೋಟಿ ಕನ್ನಡಿಗರ ಹೃದಯಕ್ಕೆ ಹತ್ತಿರವಾಗಿದ್ದಾರೆ. ಎಷ್ಟೋ ಅನುಭವವಿರುವವರು ಸಾಹಿತಿ ಬರೆದ ಹಾಗಿದೆ ಈ ಹಾಡು. ಶಿವ ಅವರಿಗೆ ಒಳಿತಾಗಲಿ ಎಂದರು ಹಿರಿಯ ಸಾಹಿತಿ ದೊಡ್ಡರಂಗೇಗೌಡ.jai ho kannadiga puneeth - saakshatv

ನಾನು “ಒರಟ ಐ ಲವ್ ಯು “ಚಿತ್ರ ಮಾಡಿದಾಗಿನಿಂದಲೂ ಶಿವ ನನಗೆ ಪರಿಚಯ.  ಕನ್ನಡದ ಹಿರಿಮೆ ಸಾರುವ ಈ ಹಾಡು ತುಂಬಾ ಚೆನ್ನಾಗಿದೆ. ಇಂತಹ ಇನ್ನೂ ಸಾಕಷ್ಟು ಹಾಡುಗಳು ಶಿವ ಅವರು ರಚಿಸಲಿ. ಅವರಿಗೆ ಬೇಕಾದ ಸಹಕಾರ ನೀಡಿತ್ತೇ‌ನೆ ಎಂದರು ನಿರ್ಮಾಪಕ ಸಿ.ಆರ್.ಮನೋಹರ್.

ಇದು ನನ್ನೊಬ್ಬನಿಂದ ಆಗಿಲ್ಲ. ನನ್ನ ಹಿಂದೆ ಸಾಕಷ್ಟು ಜನರಿದ್ದಾರೆ. ಹಾಡಿನಲ್ಲಿ ಕಾಣಿಸಿಕೊಂಡಿರುವ ಹಾಗೂ ಹಾಡನ್ನು ಬಿಡುಗಡೆ ಮಾಡಲು ಬಂದಿರುವ ಎಲ್ಲಾ ಗಣ್ಯರಿಗೆ ಧನ್ಯವಾದ. ತುಂಬಾ ದಿನಗಳ ನಂತರ ನಾನು ಈ ಕ್ಷೇತ್ರಕ್ಕೆ ಬಂದಿದ್ದೀನಿ. ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ ಬಂದಿರುವ ಈ ಹಾಡನ್ನು ಪುನೀತ್ ರಾಜಕುಮಾರ್ ಅವರಿಗೆ ಅರ್ಪಣೆ ಮಾಡುತ್ತಿದ್ದೇನೆ. ನನ್ನ ಜೀವನದಲ್ಲಿ ಮೂರು ಜ‌ನ ಗಾಡ್ ಫಾದರ್ ಇದ್ದಾರೆ. ಒಬ್ಬರು ನನ್ನ ತಂದೆ. ಇನ್ನೊಬ್ಬರು ಅಪ್ಪು ಹಾಗೂ ಮತ್ತೊಬ್ಬರು ಸಿ.ಆರ್.ಮನೋಹರ್.

ಸಿ.ಆರ್.ಮನೋಹರ್ ಅವರು ಏಕೆಂದರೆ, ಖಾಯಿಲೆಯಿಂದ ಚಿಕ್ಕ ವಯಸ್ಸಿಗೆ ನನ್ನ ಗೆಳೆಯ ಅಸುನೀಗಿದ. ನಂತರ ಆ ಕುಟುಂಬಕ್ಕೆ ಸಿ.ಆರ್.ಮನೋಹರ್ ಮಾಡಿರುವ ಉಪಕಾರ ಮರೆಯುವ ಹಾಗಿಲ್ಲ. ಹಾಗಾಗಿ ಅವರು ನನಗೆ ಗಾಡ್ ಫಾದರ್ ಎಂದು ಶಿವ ಭಾವುಕರಾದರು.

Tags: #saakshatvappujai ho kannadiga songPuneeth Raj KumarSandalwood
ShareTweetSendShare
Join us on:

Related Posts

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

ಕಾವೇರಿದ ಉಪಚುನಾವಣೆ ಅಖಾಡ; ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

ಕಾವೇರಿದ ಉಪಚುನಾವಣೆ ಅಖಾಡ; ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

by Shwetha
April 2, 2026
0

ರಾಜ್ಯದ ಉಪಚುನಾವಣೆಯ ರಾಜಕೀಯ ಕಣ ಇದೀಗ ತೀವ್ರ ಕಾವೇರಿದ್ದು, ಕಾಂಗ್ರೆಸ್ ಹಾಗೂ BJP ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುತ್ತಿವೆ. ಈ ಹಿನ್ನಲೆಯಲ್ಲಿ ಹಾಲಿ...

SSLC & PUC ಪರೀಕ್ಷೆ-2 ಪರಿಷ್ಕೃತ ವೇಳಾಪಟ್ಟಿ ಪ್ರಕಟ

SSLC & PUC ಪರೀಕ್ಷೆ-2 ಪರಿಷ್ಕೃತ ವೇಳಾಪಟ್ಟಿ ಪ್ರಕಟ

by Shwetha
April 2, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಹಾಗೂ SSLC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಹೊಸ ವೇಳಾಪಟ್ಟಿಯ ಪ್ರಕಾರ: ದ್ವಿತೀಯ ಪಿಯುಸಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram