ಸ್ಯಾಂಡಲ್ ವುಡ್ ನ ನಿರ್ಮಾಪಕ ಆನಂದ್ ಅಪ್ಪುಗೋಳ್ ಬಂಧನ

1 min read

ಸ್ಯಾಂಡಲ್ ವುಡ್ ನ ನಿರ್ಮಾಪಕ ಆನಂದ್ ಅಪ್ಪುಗೋಳ್ ಬಂಧನ

ನವದೆಹಲಿ :  ವಂಚನೆ ಪ್ರಕರಣದಲ್ಲಿ ಜಾಮೀನು ಪಡೆದ ಕೆಲವೇ ವಾರಗಳಲ್ಲಿ ಚಲನಚಿತ್ರ ನಿರ್ಮಾಪಕ ಹಾಗೂ ಸಂಗೊಳ್ಳಿ ರಾಯಣ್ಣ ಸಹಕಾರಿ ಸಂಘದ ಅಧ್ಯಕ್ಷ ಆನಂದ ಅಪ್ಪುಗೋಳ ಅವರನ್ನು ಬೆಳಗಾವಿಯ ಸ್ಥಳೀಯ ನ್ಯಾಯಾಲಯ ಬುಧವಾರ ಮತ್ತೊಮ್ಮೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರೂ ಆಗಿರುವ ಅಪ್ಪುಗೋಳ್ ಅವರನ್ನು  ಸಹಕಾರ ಬ್ಯಾಂಕ್‌ ನಲ್ಲಿ ಸುಮಾರು 250 ಕೋಟಿ ರೂಪಾಯಿ ವಂಚನೆ ಎಸಗಿದ ಆರೋಪದಡಿ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ..

ಅಪ್ಪುಗೋಳ್ ಮೇಲಿದ್ದು, ಇಡಿ ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆ(ಪಿಎಂಎಲ್‌ಎ) ಅಡಿ ಪ್ರಕರಣ ದಾಖಲಿಸಿತ್ತು. ಗ್ರಾಹಕರಿಂದ ಠೇವಣಿಯಾಗಿ ಪಡೆದ ಕೋಟ್ಯಂತರ ರೂಪಾಯಿಯನ್ನು ವಂಚಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ ನಡೆಸುತ್ತಿದೆ. 2020ರಲ್ಲಿ ಅಪ್ಪುಗೋಳ್‌ ಒಡೆತನದಲ್ಲಿದ್ದ 31.35 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತನ್ನ ಸುಪರ್ದಿಗೆ ಪಡೆದಿರುವುದಾಗಿ ಇಡಿ ತಿಳಿಸಿತ್ತು.

ಅಪ್ಪುಗೋಳ್‌ ಅವರ ಹನುಮಾನ್‌ ನಗರದಲ್ಲಿನ ಬಂಗಲೆ, ಬಾಕ್ಸೈಟ್ ರಸ್ತೆಯಲ್ಲಿನ ಜಾಗ, ತಾಲ್ಲೂಕಿನ ಬಿ.ಕೆ. ಬಾಳೇಕುಂದ್ರಿಯಲ್ಲಿನ ಮನೆ ಮತ್ತು ನೆಹರೂ ನಗರದಲ್ಲಿನ ಕಚೇರಿ ಹಾಗೂ ಅವರ ಹೆಸರಿನಲ್ಲಿನ ಬ್ಯಾಂಕ್ ಖಾತೆಗಳನ್ನು ಪಡೆದುಕೊಳ್ಳಲಾಗಿತ್ತು.

ಸಂಗೊಳ್ಳಿ ರಾಯಣ್ಣ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷರಾಗಿದ್ದ ಅಪ್ಪುಗೋಳ್ ಅವರು ಸಾರ್ವಜನಿಕರ ಠೇವಣಿ ಹಣವನ್ನು ಸಕಾಲಕ್ಕೆ ಪಾವತಿಸದೆ ಗ್ರಾಹಕರಿಗೆ ವಂಚನೆ ಮಾಡಿರುವ ಕುರಿತು ಬೆಳಗಾವಿಯ ಖಡೇಬಜಾರ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಅಪ್ಪುಗೋಳ್‌ ಅವರನ್ನು ಬಂಧಿಸಿ ವಿಚಾರಣೆ ನಡೆಸಿತ್ತು.

ಸಿಐಡಿ ಡಿವೈಎಸ್‌ಪಿ ಪುರುಷೋತ್ತಮ ನೇತೃತ್ವದ ತಂಡ ಪ್ರಕರಣದ ತನಿಖೆ ನಡೆಸಿ 2063 ಪುಟಗಳ ಚಾರ್ಜ್‌ಶೀಟ್‌ ಅನ್ನು ಬೆಳಗಾವಿ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಪ್ರಕರಣದಲ್ಲಿ ಒಟ್ಟು 13 ಜನರು 275 ಕೋಟಿ ರೂ. ಠೇವಣಿ ಹಣ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಅವಿನಾಶ್ ಅವರು ಇನ್ನಿಲ್ಲ , ಎಂದವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ನಟ

ಸಂಗೊಳ್ಳಿ ರಾಯಣ್ಣ ಸೊಸೈಟಿಯು ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ 35 ಶಾಖೆಗಳನ್ನು ಹೊಂದಿದ್ದು, 26 ಸಾವಿರ ಜನರಿಂದ ಠೇವಣಿ ಸಂಗ್ರಹಿಸಿತ್ತು. ಆನಂದ ಅಪ್ಪುಗೋಳ ಸೇರಿ ಸೊಸೈಟಿಯ 13 ನಿರ್ದೇಶಕರು ಠೇವಣಿ ಹಣವನ್ನು ಸ್ವಂತಕ್ಕೆ ಬಳಸಿಕೊಂಡು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ದೂರಲಾಗಿತ್ತು. ಈ ಕುರಿತು ಸಹಕಾರ ಇಲಾಖೆ ನಿಬಂಧಕರು 2017 ರಲ್ಲಿ ದೂರು ದಾಖಲಿಸಿದ್ದರು. ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರದ  ಅವಧಿಯಲ್ಲಿ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು.

ರಾಯಣ್ಣ ಸೊಸೈಟಿಯ ಠೇವಣಿದಾರರಿಗೆ ವಂಚನೆ ಮಾಡಿದ ಆರೋಪದಲ್ಲಿ ಸಹಕಾರಿ ಸಂಘಗಳ ಸಹಾಯಕ ನಿಬಂಧಕರು ಆನಂದ ಅಪ್ಪುಗೋಳ್ ಸೇರಿ ಆಡಳಿತ ಮಂಡಳಿ ಸದಸ್ಯರು ತಲೆ ಮರೆಸಿಕೊಂಡಿದ್ದಾರೆ ಎಂದು ದೂರು ದಾಖಲಿಸಿದ್ದರು. ನಂತರದಲ್ಲಿ ಕೆಲ ಕಾಲ ತಲೆಮರೆಸಿಕೊಂಡಿದ್ದ ಅಪ್ಪುಗೋಳ್ ಅವರನ್ನು 2018ರ ಸೆ.17 ರಂದು ಪೊಲೀಸರು ಮುಂಬೈನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd