ಶಾಂತಿಗೆ ಭಂಗ ತರುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ : ಆರಗ ಜ್ಞಾನೇಂದ್ರ belagavi saaksha tv
ಬೆಳಗಾವಿ : ಸಾರ್ವಜನಿಕರ ಶಾಂತಿಗೆ ಭಂಗ ತರುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.
ಗೃಹ ಸಚಿವರು ಇಂದು ಸಂಗೊಳ್ಳಿ ರಾಯಣ್ಣ ಸೇರಿದಂತೆ ವಿವಿಧ ಮಹನೀಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದರು.
ಈ ವೇಳೆ ಮಾತನಾಡಿದ ಅವರು, ದೇಶ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿದೆ.
ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರಿಗೆ ಅವಮಾನ ಮಾಡಿರುವುದು ಖಂಡನೀಯ.
ಸಂಗೊಳ್ಳಿ ರಾಯಣ್ಣ , ಶಿವಾಜಿ ಮಹಾರಾಜ್, ಬಸವಣ್ಣ ಮನುಕುಲದ ಏಳಿಗೆಗಾಗಿ ಶ್ರಮಿಸಿದವರು.
ಅವರಿಗೆ ಅವಮಾನ ಮಾಡಿದವರನ್ನು ಶಿಕ್ಷೆಗೆ ಗುರಿಪಡಿಸುತ್ತೇವೆ ಎಂದರು.
ಇನ್ನು ಕೆಲವು ಕಿಡಿಗೇಡಿಗಳು ಮಹಾರಾಷ್ಟ್ರ- ಕರ್ನಾಟಕ ಎರಡೂ ರಾಜ್ಯಗಳ ಮಧ್ಯೆ ಕೆಲವು ಕಿಡಿಗೇಡಿಗಳು ದ್ವೇಷಭಾವ ಮೂಡಿಸುತ್ತಿದ್ದಾರೆ.
ದೇಶ ಭಕ್ತರು , ಮಹಾನ್ ಪುರುಷರಿಗೆ ಅಪಮಾನ ಮಾಡುವುದಿಲ್ಲ. ಸಾರ್ವಜನಿಕ ಶಾಂತಿಗೆ ಭಂಗ ತರುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.









