ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅವಮಾನ : ಆರಗ ಜ್ಞಾನೇಂದ್ರ ಖಂಡನೆ Araga gnanendra saaksha tv
ಬೆಂಗಳೂರು : ಬೆಳಗಾವಿ ನಗರದಲ್ಲಿ ಪ್ರಾತಸ್ಮರಣೀಯ ವೀರನಾದ, ಸಂಗೊಳ್ಳಿ ರಾಯಣ್ಣ ರವರ ಪ್ರತಿಮೆಗೆ ಹಾನಿ ಮಾಡಿರುವ ಘಟನೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಖಂಡಿಸಿದ್ದಾರೆ.
ಸಂಗೋಳ್ಳಿ ರಾಯಣ್ಣ ಹಾಗೂ ಶಿವಾಜಿ ಪ್ರತಿಮೆಗಳಿಗೆ ಹಾನಿ ಮಾಡಿರುವ ಬಗ್ಗೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಹಾಗೂ ಶಿವಾಜಿ ಮಹಾರಾಜ್ ಅವರುಗಳು ನಮ್ಮೆಲ್ಲರ ಹೆಮ್ಮೆಯ ಪ್ರತೀಕವಾಗಿದ್ದಾರೆ.
ಪ್ರತಿಯೊಬ್ಬ ನಾಗರಿಕರೂ ಹೆಮ್ಮೆ ಹಾಗೂ ಗರ್ವದಿಂದ ನೆನಸಿಕೊಳ್ಳುವಂತ ಭಾರತೀಯ ಪುತ್ರರು. ಇವರ ಹೆಸರಿನಲ್ಲಿ, ಕೆಲವು ಕಿಡಿಗೇಡಿಗಳು, ದುಷ್ಕೃತ್ಯ ನಡೆಸಿ, ಭಾಷಾ ಹಾಗೂ ಸಹೋದರತ್ವ ಬಾಂಧವ್ಯವನ್ನು ಕೆಡಿಸು ವಂತಹ ಕೃತ್ಯ ಎಸಗಿರುವ ಘಟನೆ, ಅಕ್ಷಮ್ಯ ಅಪರಾಧವಾಗಿದೆ ಎಂದು ಹೇಳಿದರು.
ಇನ್ನು ಈ ಕುರಿತು ಮಾಹಿತಿಯನ್ನು ಪಡೆದುಕೊಂಡಿದ್ದೇನೆ, ಹಾಗೂ ಬೆಂಗಳೂರು ಹಾಗೂ ಬೆಳಗಾವಿ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಎಫ್ ಐ ಅರ್ ದಾಖಲಾಗಿದ್ದು, ಕೆಲವರನ್ನು ವಶಕ್ಕೆ ಪಡೆಯಲಾಗಿದೆ . ರಾಜ್ಯದ ಜನತೆ ಶಾಂತಿ ಹಾಗೂ ಸಾಮರಸ್ಯ ಕಾಪಾಡಲು ಸಹಕರಿಸೇಕೆಂದು ಗೃಹ ಸಚಿವರು ವಿನಂತಿಸಿಕೊಂಡಿದ್ದಾರೆ.